2025ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Posted by


ಬೆಂಗಳೂರು : 2025ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ (Karnataka Sahitya Academy) ರಿಜಿಸ್ಟ್ರಾರ್ ಕರಿಯಪ್ಪ ಎನ್ ಅವರು ತಿಳಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, (Karnataka sahayata Academy )ಕನ್ನಡ ಭವನ, 2ನೇ ಮಹಡಿ ಜೆ.ಸಿ. ರಸ್ತೆ, ಬೆಂಗಳೂರು 560 002 ಇಲ್ಲಿಗೆ ರಜಿಸ್ಟರ್ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ 2026ರ ಜೂನ್ 30ರ ಒಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Suddi Belaku