ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ ಜೀವನದಲ್ಲಿ ಸಮಯ ಹಾಳು ಮಾಡದೇ ಕಠಿಣ ಶ್ರಮ ಹಾಕಿ ಅಭ್ಯಾಸ ಮಾಡಿ ಈಗ ಯ ಪಿಎಸ್‌ಪಿ ಪಾಸು ಮಾಡಿದ್ದಾರೆ. ಇಷ್ಟರಲ್ಲಿಯೇ ಅವರು ಜಿಲ್ಲಾಧಿಕಾರಿಯಂತಹ ಉನ್ನತ ಹುದ್ದೆಗೆ ಹೋಗುತ್ತಾರೆ, ಅವರೇ ನಿಮಗೆ ಪ್ರೇರಣೆ ಎಂದು ಮಕ್ಕಳನ್ನು ಪ್ರೇರೆಸಿದರು. ಹೆಚ್ಚಿನ ಅಂಕಗಳನ್ನು ಪಡೆದ ಮಕ್ಕಳನ್ನು ಗುರುತಿಸಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಅವರ ನೇತೃತ್ವದ ತಂಡ ಉತ್ತಮ ಕೆಲಸ ಮಾಡಿದೆ. ಇದು ಇತರೇ ಮಕ್ಕಳಿಗೆ ಮತ್ತಷ್ಟು ಓದಲು ಹುಮ್ಮಸ್ಸು ನೀಡುತ್ತದೆ. ಮಕ್ಕಳು ಮೊಬೈಲ್ ಚಟದಿಂದ ದೂರವಿರಬೇಕು. ವಿದ್ಯಾರ್ಥಿ ಜೀವನ ಬಂಗಾರದಂತಹ ಜೀವನ, ಅದಕ್ಕೇ ಅದನ್ನು ಹಾಳು ಮಾಡಿಕೊಳ್ಳದೇ ಕೇವಲ ಈ ಸಮಯ ಶಿಕ್ಷಣಕ್ಕೆ ಮೀಸಲಿಡಬೇಕೆಂದರು.ಯ ಮಿಪಿಎಸ್ ಪಿ ಸಾಧಕಿ ಡಾ.ನಿವೇದಿತಾ ಭಾವಿಮನಿ ಮಾತನಾಡಿ, ಜೀವನದಲ್ಲಿ ಸಾಧನೆಗೆ ಶಿಕ್ಷಣ ಒಂದೇ ಮೈಲುಗಲ್ಲು. ಕಾರಣ, ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಕಠಿಣ ಶ್ರಮ ಹಾಕಿ ಅಭ್ಯಾಸ ಮಾಡಿದರೆ ನಿಗದಿತ ಗುರಿ ತಾನಾಗಿಯೇ ಮುಟ್ಟಲು
You Might Also Like
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ















Leave a Reply