
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ಮಹಾಸಾಧ್ವಿ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಇದೇ ಮೇ 10 ಭಾನುವಾರ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜ ಅಧ್ಯಕ್ಷ ರಾಮರೆಡ್ಡಿಗೌಡ ತಂಗಡಗಿ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ
ಈ ಜಯಂತಿ ಆಯೋಜಿಸಿ, ಹೇಮರೆಡ್ಡಿ ಮಲ್ಲಮ್ಮ ಅವರ
ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಗುವುದು
ಅದಕ್ಕೂ ಪೂರ್ವದಲ್ಲಿ ಬೆಳಿಗ್ಗೆ ಬಸವೇಶ್ವರ ನಗರದ ಶ್ರೀ ಈಶ್ವರ ಬಸವಣ್ಣ ದೇವಸ್ಥಾನದಿಂದ ಸರಕಾರಿ ಪದವಿ ಮಹಾವಿದ್ಯಾಲಯದ ವರೆಗೆ ಹೇಮರೆಡ್ಡಿ ಮಲ್ಲಮ್ಮ ತಾಯಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ನಡೆಯಲಿರುವ ಭವ್ಯ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಮೆರವಣಿಗೆಯು ಬಸವಣ್ಣ ದೇವಸ್ಥಾನದಿಂದ ತಹಶಿಲ್ದಾರರ ಕಚೇರಿ – ಶಾಸ್ತ್ರಿ ಚೌಕ್ – ಸುಭಾಶ ಚೌಕ್ ಮುಖಾಂತರ ಸರಕಾರಿ ಪದವಿ ಕಾಲೇಜು ತಲುಪಲಿದ್ದು,ಅಲ್ಲಿ ಸರಕಾರಿ ಶಿಷ್ಟಾಚಾರದ ಪ್ರಕಾರ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಸಮಾಜದ ಬಾಂಧವರು ಹಾಗೂ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಅವರು ಕೋರಿದ್ದಾರೆ.










Leave a Reply