ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದು,ನಿರ್ಗಮಿತ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು.

2016 ನೇ ವೃಂದದ ಐಎಎಸ್ ಅಧಿಕಾರಿಗಳಾದ ಶ್ರೀ ರಾಹುಲ್ ಪಾಂಡ್ವೆ ಅವರು ಕಲ್ಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದನ್ವಯ ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಶ್ರೀ ರಾಹುಲ್ ಪಾಂಡ್ವೆ ಅವರು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ, ಕಲ್ಬುರ್ಗಿ ನಗರ ಪಾಲಿಕೆ ಆಯುಕ್ತರಾಗಿ, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಹಾಗೂ ಕಲ್ಬುರ್ಗಿ
ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಕಲ್ಕತ್ತಾ ಐಐಎಮ್ ದಿಂದ ಏಮ್ ಬಿ ಎ ಮುಗಿಸಿರುವ ಅವರು, ಪುಣೆ ಯುನಿವರ್ಸಿಟಿಯಿಂದ ಬಿಎಸ್ಸಿ ಪದವಿ ಪಡೆದಿದ್ದಾರೆ.

ನಿರ್ಗಮಿತ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಈಗ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

You Might Also Like

Leave a Reply

Your email address will not be published. Required fields are marked *

Suddi Belaku