
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.
ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ ಜೆಸ್ಕಾಂ ಉಪ ಕೇಂದ್ರದ ಕಛೇರಿವರೆಗೆ ರಸ್ತೆ ಅಗಲೀಕರಣ ಮತ್ತು ವಿಭಜಕ, ಪುಟಪಾತ್ ನಿರ್ಮಾಣ, ವಿದ್ಯುತ್ ಸೌಕರ್ಯ ಕಲ್ಪಿಸುವುದು, ಅಲ್ಲಿಂದ ರಸ್ತೆ ೩.೯ ವರೆಗೆ ಮರು ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಈ ಕ್ರಾಸ್ ಅತೀ ಜನಸಂದಣಿ ಪ್ರದೇಶವಾಗಿದೆ, ಇಲ್ಲಿ ವಾಹನಗಳ ನಿಲುಗಡೆಗೆ, ಸುಗಮ ಸಂಚಾರಕ್ಕೆ ಅನುಕೂಲವಾಗಲೂ ಒಟ್ಟು ೯೦೦ ಮೀಟರ್ ರಸ್ತೆ ಅಗಲೀಕರಣ ಕೈಗೊಳ್ಳಲಾಗಿದೆ, ಒಟ್ಟು ೪.೮ ಕಿ.ಮೀ ರಸ್ತೆ ಮರು ಡಾಂಬರೀಕರಣ ಕೈಗೊಳ್ಳುವುದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗುವುದು ಎಂದು ತಿಳಿಸಿದರು.
ಪ್ರತಿ ವರ್ಷ ಮಳೆಗಾಲದಲ್ಲಿ ಹಳ್ಳಿಗಳಿಂದ ಜನರು ಹಾಗೂ ಶಾಲಾ ವಿಧ್ಯಾರ್ಥಿಗಳ ವಾಹನಗಳು ಬರಲು ಪಗಲಾಪೂರ ಸೇತುವೆ ಕಿರಿದಾಗಿತ್ತು ಬಹಳ ತೊಂದರೆಯಾಗಿತ್ತು, ಸಮಸ್ಯೆ ಅರಿತು ೮ ಕೋಟಿ ರೂ. ವೆಚ್ಚದಲ್ಲಿ ದೊಡ್ಡ ಸೇತುವೆ ಹಾಗೂ ರಸ್ತೆ ಸುಧಾರಣೆ ಕಾಮಗಾರಿ ಕೈಗೊಳ್ಳುವ ಮೂಲಕ ಶಾಶ್ವತ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲಾಗಿದೆ ಎಂದು ಹೇಳಿದರು.
ನಗರದ ಇನ್ನೊಂದು ಪ್ರಮುಖ ರಸ್ತೆ ಹತ್ತಿಕುಣಿ ಕ್ರಾಸ್‌ನಲ್ಲಿಯೂ ಕೂಡ ಇದೇ ರೀತಿ ಕಾಮಗಾರಿ ಕೈಗೊಳ್ಳಲು ೫ ಕೋಟಿ ರೂ. ಮೀಸಲಿಡಲಾಗಿದೆ, ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಿ, ಜನರಿಗೆ ಅನುಕೂಲತೆ ಒದಗಿಸಿಕೊಡಲಾಗುವುದು ಎಂದರು.
ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಭರವಸೆಗಳಂತೆ ಪಂಚ ಗ್ಯಾರಂಟಿಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಜೊತೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ನಾನು ಕೂಡ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ಧಿಗೆ ಗಮನ ನೀಡುತ್ತಿದ್ದೇನೆ, ನನ್ನ ಕಾರ್ಯವೈಖರಿ ಬಗ್ಗೆ ಅಸಮಧಾನ ಹೊಂದಿರುವ ವಿರೋಧಿಗಳು ಕ್ಷÄಲ್ಲಕ ಟೀಕೆಗಳನ್ನು ಮಾಡಿ, ಅಪಪ್ರಚಾರ ಮಾಡುತ್ತಿದ್ದಾರೆ, ಜನರು ಎಲ್ಲವನ್ನು ವಾಸ್ತವಿಕ ಚಟುವಟಿಕೆಗಳನ್ನು ಗಮನಿಸುತ್ತಿದ್ದಾರೆ, ಅವರೇ ಸಕಾಲದಲ್ಲಿ ಉತ್ತರ ನೀಡಲಿದ್ದಾರೆ ಎಂದು ಪರೋಕ್ಷವಾಗಿ ವಿರೋಧಿಗಳಿಗೆ ಟಾಂಗ್ ನೀಡಿದರು,
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸುದರ್ಶನ ನಾಯಕ ಮಾತನಾಡಿ, ಅನುಭವಿ ರಾಜಕಾರಣಿಯಾಗಿರುವ ಶಾಸಕರು ಸರಳವಾಗಿ ಜನರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸಿಗುತ್ತಾರೆ, ಅವರ ಸಮಸ್ಯೆಗಳಿಗೆ ಆದಷ್ಟೂ ಸ್ಪಂಧಿಸಿ ಪರಿಹರಿಸುವ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಯತ್ನಿಸುತ್ತಿದ್ದಾರೆ, ಪರಿಣಾಮ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಹೊಸ ಕಾಯಕಲ್ಪ ನೀಡಲು ಗಮನ ನೀಡುತ್ತಿದ್ದಾರೆ ಎಂದು ಹೇಳಿದರು.
ಶಾಂತಿ, ಸಾಮರಸ್ಯಕ್ಕೆ ಹೆಸರಾಗಿರುವ ಕ್ಷೇತ್ರದಲ್ಲಿ ಶಾಸಕರು ಸದಾ ಸಮಾಧಾನ, ಕ್ರೀಯಾಶೀಲವಾಗಿ ಪ್ರವಾಸ ಕೈಗೊಂಡು ಜನರ ಕುಂದು-ಕೊರತೆಗಳನ್ನು ಆಲಿಸಿ, ಆ ಹಳ್ಳಿಗಳ ತುರ್ತು ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಜನರಿಗೆ ಅನುಕೂಲತೆಗಳನ್ನು ಒದಗಿಸಿದ್ದಾರೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪರಶುರಾಮ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಮಗಾರಿ ಮಾಹಿತಿ ನೀಡಿದರು.
ವೇದಿಕೆ ಮೇಲೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ ಕಾಡ್ಲೂರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಿಲೋಫರ ಬಾದಲ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಶಾಮಸನ್ ಮಾಳಿಕೇರಿ, ಸುರೇಶ ಮಡ್ಡಿ, ಸಾಯಿಬಣ್ಣ ಬಾಡಿಯಾಳ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಚಮರಡ್ಡಿ ಇಮಾನವೆಲ್, ಮಲ್ಲಣ್ಣ ದಾಸನಕೇರಿ, ಬಸರಾಜಪ್ಪ ಬಾಗ್ಲಿ, ಗಣೇಶ ದುಪ್ಪಲ್ಲಿ, ಚನ್ನಕೇಶವಗೌಡ ಬಾಣತಿಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.











Leave a Reply