ಅನುಭವಿ ನಾಯಕ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು: ಆಕಾಶ ಪವಾರ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಹಾಲಿ ಶಾಸಕ ಹಾಗೂ ಮಾಜಿ ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಅಖಿಲ ಭಾರತ ಬಂಜಾರಾ ಸೇವಾ ಸಂಘ ಹಾಗೂ ಜಿಲ್ಲಾ ಅಧ್ಯಕ್ಷರು ಹಾಗೂ ಕಾಂಗ್ರೆಸ ಯುವ ಮುಖಂಡರಾದ ಆಕಾಶ ಪವಾರ ಒತ್ತಾಯಿಸಿದೆ.
​ಸಮಾಜದ ಹಿರಿಯ ನಾಯಕ ಮತ್ತು ಅನುಭವಿ ರಾಜಕಾರಣಿ ಆದ ​ರುದ್ರಪ್ಪ ಲಮಾಣಿ ಅವರು ಲಮಾಣಿ ಸಮಾಜದ ಅತ್ಯಂತ ಹಿರಿಯ ಮತ್ತು ಗೌರವಾನ್ವಿತ ನಾಯಕರಾಗಿದ್ದಾರೆ. ಈ ಹಿಂದೆ ವಿಧಾನಸಭಾ ಉಪ ಸಭಾಧ್ಯಕ್ಷರಾಗಿ ಅತ್ಯಂತ ಯಶಸ್ವಿಯಾಗಿ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಅವರ ಸುದೀರ್ಘ ಸೇವೆ ಮತ್ತು ಹಿರಿತನವನ್ನು ಪರಿಗಣಿಸಿ ಅವರಿಗೆ ಈ ಬಾರಿ ಉನ್ನತ ಸ್ಥಾನ ನೀಡಬೇಕು ಎಂದು ಆಗ್ರಹಿದ್ದಾರೆ.

​”ಲಮಾಣಿ ಸಮಾಜದ ಹಿತರಕ್ಷಣೆ ಮತ್ತು ಅಭಿವೃದ್ಧಿಗಾಗಿ ರುದ್ರಪ್ಪ ಲಮಾಣಿ ಅವರಂತಹ ಹಿರಿಯ ಅನುಭವಿ ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು.​ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ
​ಪ್ರಸ್ತುತ ಲಮಾಣಿ ಸಮುದಾಯದಿಂದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರಾಗಿ ರುದ್ರಪ್ಪ ಲಮಾಣಿ ಅವರು ಆಯ್ಕೆಯಾಗಿದ್ದಾರೆ. ಇಡೀ ಸಮುದಾಯವನ್ನು ಪ್ರತಿನಿಧಿಸುವ ಏಕೈಕ ಧ್ವನಿಯಾಗಿರುವುದರಿಂದ, ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಲಮಾಣಿ ಸಮಾಜಕ್ಕೆ ದೊಡ್ಡ ರಾಜಕೀಯ ಮನ್ನಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

Suddi Belaku