ಗ್ಯಾರಂಟಿ ಯೋಜನೆ ನಿಲ್ಲಿಸಿ, ರೈತರ ಸಾಲ ಮನ್ನಾ ಮಾಡಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಶಾಸಕ ಕಂದಕೂರು ಆಗ್ರಹ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವರ್ಷ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ರೈತರ ಸಾಲ ಮನ್ನಾ ಮಾಡಬೇಕು ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಒತ್ತಾಯಿಸಿದ್ದಾರೆ.

​ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರೈತರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
​ರೈತರ ಆತ್ಮಹತ್ಯೆ ತಡೆಯಲು ಸಾಲ ಮನ್ನಾ ಅನಿವಾರ್ಯ
“ರಾಜ್ಯದಲ್ಲಿ ಮಳೆಯಿಲ್ಲ, ಬೆಳೆಯಿಲ್ಲ. ಜೀವನ ನಿರ್ವಹಣೆ ಕಷ್ಟವಾಗಿ ರೈತರು ಗುಳೆ ಹೋಗುತ್ತಿದ್ದಾರೆ. ಸಾಲದ ಬಾಧೆ ತಾಳಲಾರದೆ ರೈತರು ಆತ್ಮಹತ್ಯೆಯಂತಹ ಕೆಟ್ಟ ದಾರಿಗೆ ಹೋಗಬಾರದು. ಹೀಗಾಗಿ ತಕ್ಷಣವೇ ರಾಷ್ಟ್ರೀಯ ಬ್ಯಾಂಕ್ ಮತ್ತು ಸಹಕಾರ ಸಂಘಗಳ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು,” ಎಂದು ಆಗ್ರಹಿಸಿದರು.
​140 ಸೀಟು ಗೆದ್ದಿರುವ ನೀವು ಸಾಲ ಮನ್ನಾ ಮಾಡಿ
“ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದರು. ಈಗ ಕಾಂಗ್ರೆಸ್ ಬಳಿ 140 ಶಾಸಕರ ಬಲವಿದೆ. ರೈತರ ಸಾಲ ಮನ್ನಾ ಮಾಡಲು ಸುಮಾರು 30 ರಿಂದ 40 ಸಾವಿರ ಕೋಟಿ ರೂಪಾಯಿ ವೆಚ್ಚವಾಗಬಹುದು. ಇದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷ ನಿಲ್ಲಿಸಿ, ಆ ಹಣವನ್ನು ರೈತರ ಸಾಲ ಮನ್ನಾಗೆ ಬಳಸಿ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಶಾಸಕ ಕಂದಕೂರು ಸವಾಲು ಹಾಕಿದರು.

You Might Also Like

Leave a Reply

Your email address will not be published. Required fields are marked *

Suddi Belaku