
ಸುದ್ದಿ ಬೆಳಕು ವಾರ್ತೆ
ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು.
ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್ಐಆರ್ ಉದ್ದೇಶ. ಮತಪಟ್ಟಿ ಪರಿಷ್ಕರಣೆಗೆ ನಿಯೋಜಿಸಲ್ಪಟ್ಟ ಬಿಎಲ್ಓಗಳು ಜುಲೈ 29ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರ ಪರಿಶೀಲಿಸಲಿದ್ದಾರೆ. ಈ ವೇಳೆ ಮತದಾರರು ಅರ್ಜಿಯನ್ನು ಭರ್ತಿ ಮಾಡಿ, ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ತಹಶಿಲ್ದಾರ ಮಂಗಳ ರವರು ಮಾತನಾಡಿ, ಮತದಾರರ ಪಟ್ಟಿಯಲ್ಲಿರುವ ಹೆಸರು ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಇದೇ ಅವಧಿಯಲ್ಲಿ ನಡೆಯಲಿದೆ. ಹೆಸರು ಒಂದು ಕಡೆ ಮಾತ್ರ ಉಳಿಸುವ ಪ್ರಕ್ರಿಯೆಯೂ ಸಹ ನಡೆಯುತ್ತದೆ. ಜೊತೆಗೆ ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಕೂಡ ಅವಕಾಶವಿರುತ್ತದೆ ಎಂದರು.
ತಾಲ್ಲೂಕಿನ ಪ್ರತಿಯೊಬ್ಬ ನಾಗರಿಕರು ಈಗಾಗಲೇ ಸರ್ಕಾರದ ನಿರ್ದೇಶನದಂತೆ, ನೈಜತೆಯಿಂದ ಪ್ರತಿಯೊಬ್ಬರು ಗೊಂದಲ ಮಾಡಿಕೊಳ್ಳದೆ, ಅಗತ್ಯ ದಾಖಲೆಗಳು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಕೊಳ್ಳಬೇಕಿದೆ, ಬಿಎಲ್ಓ ಗಳು ಮನೆ ಮನೆಗೆ ಭೇಟಿ ನೀಡಿದಾಗ ಹಾಗೂ ರೈತರು ಹೊಲದ ಕೆಲಸಕ್ಕೆ ತೆರಳಿದಾಗ ಮಾರನೆ ದಿನವು ಬಿಎಲ್ ಓ ಗಳು ಮತ್ತೋಮ್ಮೆ ಆಗಮಿಸದಾಗ ದಾಖಲೆಗಳು ಸಲ್ಲಿಸಿ ಪರಿಷ್ಕರಣೆ ಮಾಡಿಕೊಳ್ಳಬೇಕಿದೆ ಎಂದರು.
ಈ ವೇಳೆ ಸಹಾಯಕ ನಿರ್ದೇಶಕರು ಕಿರಾಣಬಾಬು, ಸಹಾಯಕ ಲೆಕ್ಕಧಿಕಾರಿ ಶರಣಬಸವ, ಪಿಡಿಒ ಸಿದ್ದವಿರಪ್ಪ, ಬಿ ಆರ್ ಪಾಟೀಲ್, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್ ತಾಲ್ಲೂಕು ಪಂಚಾಯತಿ, ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು & ವಿಬಿ-ಜಿ ರಾಮ ಜಿ ಯೋಜನೆಯ ಸಿಬ್ಬಂದಿಗಳು ಮತ್ತು ತಾಲ್ಲೂಕಿನ ನಾಗರಿಕರು ಭಾಗವಹಿಸಿದರು.











Leave a Reply