ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

Posted by

ಸುದ್ದಿ ಬೆಳಕು ವಾರ್ತೆ

ಹುಣಸಗಿ : ಜುಲೈ 21ರಂದು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಯಾದಗಿರಿ, ಹುಣಸಗಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಬೆಂಗಳೂರಿನ ಪ್ರಸಿದ್ಧ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ 3 ಶಸ್ತ್ರಚಿಕಿತ್ಸಾ ಹಾಗೂ ರಕ್ತದಾನ ಶಿಬಿರವನ್ನು ಹುಣಸಗಿ ಯುಕೆಪಿ ಕ್ಯಾಂಪ್ ನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ.ಎನ್. ದಂಡಿನ್ ಹೇಳಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯೊಂದಿಗೆ ಮಾತನಾಡಿ, ಜಿಪಂ ಮಾಜಿ ಸದಸ್ಯ ನಾಗಣ್ಣ ಸಾಹು ದಂಡಿನ್ ಅವರ ವತಿಯಿಂದ, ఎఐసిసి ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಅವರ ಜನ್ಮದಿನ ನಿಮಿತ್ತ ಬಡವರು, ಅಸಹಾಯಕರಿಗೆ ಅನುಕೂಲ ದೃಷ್ಟಿಯಿಂದ ಶಿಬಿರ ಆಯೋಜಿಸಿದೆ.

ಕಣ್ಣಿನ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ತಿಳಿಸಿದರು. ಶಸ್ತ್ರಚಿಕಿತ್ಸೆಗೆ ಅರ್ಹ ರಾದವರನ್ನು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದರು.

ಶಿಬಿರದಲ್ಲಿ ಶಾಸಕ ರಾಜಾ ವೇಣುಗೋಪಾಲನಾಯಕ ಹಾಗೂ ಹುಣಸಗಿ ಪಟ್ಟಣದ ಮುಖಂಡರು ಭಾಗವಹಿಸಲಿದ್ದಾರೆ. ನೇತ್ರ ತಪಾಸಣೆ ಮಾಡಿಸಿಕೊಳ್ಳುವವರು 9731679306, 7090404070 ಸಂಪರ್ಕಿಸಬಹುದಾಗಿದೆ ಎಂದು ಮೊ: ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಚಪ್ಪ ಪಟ್ಟಣಶೆಟ್ಟಿ, ಪಟ್ಟಣ ಪಂಚಾಯತ ಸದಸ್ಯ ಸಿದ್ರಾಮಪ್ಪ ಮುದಗಲ್, ಗುಂಡು ಅಂಗಡಿ, ರಮೇಶ ವಾಲಿ, ಚನ್ನಕುಮಾರ ಬ್ಯಾಕೋಡ್, ವಿಠಲ್ ಪವಾರ್ ಇದ್ದರು.

You Might Also Like

Leave a Reply

Your email address will not be published. Required fields are marked *

Suddi Belaku