
ಸುದ್ದಿ ಬೆಳಕು ವಾರ್ತೆ
ಶಹಾಪುರ: ಅರ್ಹ ಫಲಾನುಭವಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸುವ ಹಿನ್ನಲೆಯಲ್ಲಿ ಗೃಹ ಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವ ನಿದಿ ಯೋಜನೆಗಳಡಿ ನೋಂದಣಿಯಾದ ಫಲಾನುಭವಿಗಳನ್ನು ಗ್ಯಾರಂಟಿ ಅನುಷ್ಟಾನ ಇಲಾಖೆಯ ಅಧಿಕಾರಿಗಳು ಮರು ಪರಿಶೀಲಿಸಿ, ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಟಾನ ತಾಲೂಕ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪಗೌಡ ಆಲ್ದಾಳ ಅವರು ಸೂಚಿಸಿದರು.
ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜುಲೈ 18 ರಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕ ಮಟ್ಟದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹ ಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ತಿಂಗಳ ವಿದ್ಯುತ್ ಬಿಲ್ ಕೊಡಲು ಮನೆಗೆ ಭೇಟಿ ನೀಡಿದಾಗ, ಆ ಫಲಾನುಭವಿಗಳ ಆಧಾರ್ ಕಾರ್ಡ್ ಹಾಗೂ ಓಟರ್ ಐಡಿ ಪಡೆದು ಪರಿಶೀಲಿಸಿ, ಮರು ನೋಂದಣಿ ಮಾಡಲಾಗುತ್ತಿದೆ. ಈ ಪ್ರಕ್ರಿಯೇ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಹಳ್ಳಿಗಳಲ್ಲಿ ಇನ್ನೂ ಕೆಲವು ಮನೆಗಳಿಗೆ ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ, ಈ ಬಗ್ಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಹಲವು ಭಾರಿ ಚರ್ಚಿಸಿದರೂ ಇಲಾಖೆಯಿಂದ ಸೂಕ್ತ ಪರಿಹಾರ ಸಿಗುತ್ತಿಲ್ಲ ಎಂದು ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯರೊಬ್ಬರು ಪ್ರಶ್ನಿಸಿದರು. ಆಗ ಹೊಸದಾಗಿ ರಚನೆಯಾದ ಬಡಾವಣೆಗಳಿಗೆ, ಬಡಾವಣೆಯ ಮಾಲೀಕನೇ ವಿದ್ಯುತ್ ಸೌಲಭ್ಯ ಒದಗಿಸುವ ನಿಯಮವಿದೆ ಎಂದು ತಿಳಿಸಿದರು.

ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ಶಾಲಾ ಮಕ್ಕಳಿಗೆ ಬಸ್ ಸೌಲಭ್ಯದ ಕೊರತೆಯಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವAತಾಗಿದೆ ಹೀಗಾಗಿ ಆ ಗ್ರಾಮದ ಮಕ್ಕಳಿಗೆ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಬಸ್‌ಗಳನ್ನು ಬಿಡುವ ಮೂಲಕ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸದಸ್ಯರೊಬ್ಬರು ಸಭೆಯಲ್ಲಿ ಮನವಿ ಮಾಡಿದರು.
ಅನ್ನಭಾಗ್ಯ ಯೋಜನೆಯಡಿ ತಾಲೂಕಿನ ಎಲ್ಲಾ ಪಂಡಿತರ ಅಂಗಡಿಗಳಲ್ಲಿ ಯೋಜನೆಯ ನಿಯಮನುಸಾರ ಎಲ್ಲಾ ಫಲಾನುಭವಿಗಳಿಗೆ ಪಡಿತರ ವಿತರಣೆಯಾಗುತ್ತಿದೆ, ಹೀಗಾಗಿ ಶೇ.100ರಷ್ಟು ಫಲಾನುಭವಿಗಳು ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವುದು ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು.
ಈ ವೇಳೆ ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೂ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ಶರಭೈ, ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯರಾದ ಶ್ರೀ ಶರಣಗೌಡ ಅಣಬಿ, ಶ್ರೀ ಮಲ್ಲಣ್ಣಗೌಡ ತಿಪ್ಪನಹಳ್ಳಿ, ಶ್ರೀ ರಮೇಶ ಗುರಿಕಾರ, ಶ್ರೀ ರಾಯಪ್ಪ ಗಂಗನಾಳ, ಶ್ರೀ ಚನ್ನಬಸಪ್ಪ ಜಾಯಿ, ಶ್ರೀ ಹುಸೇನ್ ಭಾಷಾ, ಶ್ರೀ ಬಸವರಾಜ ಕಂದಳ್ಳಿ, ಶ್ರೀಮತಿ ತಾಯಮ್ಮ ಶ್ರೀಕಾಂತ, ಶ್ರೀ ಹಣಮಂತ್ರಾಯ ಹೊನ್ನಪ್ಪ, ಶ್ರೀ ಬಸಣ್ಣಗೌಡ, ಶ್ರೀ ಬಸಣ್ಣ ಮಲ್ಲಯ್ಯ ಭಂಗಿ, ಶ್ರೀ ಸಿದ್ದಣ್ಣ ದೇಸಾಯಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಇಲಾಖೆಯ ಅಧಿಕಾರಿಗಳು ಇದ್ದರು.











Leave a Reply