
ಸುದ್ದಿ ಬೆಳಕು ವಾರ್ತೆ
ರಾಯಚೂರು: ಅಲ್ಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕು…
ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಾರಾಯಣಪುರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿದರೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವುದರ ಜೊತೆಗೆ ರೈತರ ಬದುಕಿಗೂ ಆಸರೆಯಾಗಲಿದೆ.
ಸರ್ಕಾರ ಈಗಾಗಲೇ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರು ಹರಿಸಲು ನೀಡಿರುವ ಆದೇಶವನ್ನು ಮರುಪರಿಶೀಲಿಸಿ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೀರಾವರಿ ಉದ್ದೇಶಕ್ಕೂ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಇದರಿಂದ ರೈತರ ಕೃಷಿ ಭೂಮಿಗಳಿಗೆ ನೀರು ಲಭ್ಯವಾಗಿ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.
“ಜಲಾಶಯದಲ್ಲಿ ನೀರು ತುಂಬಿದ್ದರೂ ಕಾಲುವೆಗಳಲ್ಲಿ ಹರಿಯದಿದ್ದರೆ ರೈತನ ಹೊಲ ಬರಿದಾಗುತ್ತದೆ. ರೈತನ ಹೊಲ ಹಸಿರಾದಾಗಲೇ ರಾಜ್ಯದ ಬದುಕು ಸಮೃದ್ಧಿಯಾಗುತ್ತದೆ. ಆದ್ದರಿಂದ ನೀರನ್ನು ನದಿಗೆ ಮಾತ್ರವಲ್ಲ, ರೈತನ ನೆಲಕ್ಕೂ ಹರಿಸುವ ದೂರದೃಷ್ಟಿಯ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು.”
ರೈತರ ಹಿತದೃಷ್ಟಿಯಿಂದ ಸರ್ಕಾರ ವಿಳಂಬ ಮಾಡದೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ನಾರಾಯಣಪುರ ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸುವ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ..











Leave a Reply