ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು.

ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.

ಮತದಾರರ ಪಟ್ಟಿಯಲ್ಲಿ ಅನರ್ಹ ಹೆಸರುಗಳು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದು ಸಹ ಅಷ್ಟೇ ಮುಖ್ಯವಾಗಿದೆ. ಮರಣ ಹೊಂದಿರುವವರು, ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಹೆಸರು ಹೊಂದಿರುವವರು ಹಾಗೂ ನಿಯಮಾನುಸಾರ ಮತದಾನದ ಅರ್ಹತೆ ಇಲ್ಲದವರ ಹೆಸರುಗಳು ಪಟ್ಟಿಯಲ್ಲಿ ಇರದಂತೆ ಪರಿಶೀಲನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಮತದಾರರ ಪಟ್ಟಿಯು ಸಂಪೂರ್ಣ ಪಾರದರ್ಶಕ ಹಾಗೂ ನಿಖರವಾಗಿರುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರನಿಗೂ ಮತದಾನದ ಹಕ್ಕು ದೊರೆಯುವಂತೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಮಲ್ಲಿಕಾರ್ಜುನ ಕುರುಕುಂಬಳ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಸುಭಾಷ್ ಮಾಳಿಕೇರಿ, ರಾಠೋಡ, ಚೆನ್ನವೀರಯ್ಯ ಸ್ವಾಮಿ, ಶ್ರೀಕಾಂತ ಸುಗುಲ್ಕರ್, ಮಲ್ಲು ಮುದ್ನಾಳ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Suddi Belaku