ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17ರಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 136ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ ಆಲಿಸಿದರು.

ನಗರದ ವಾರ್ಡ್ ಸಂಖ್ಯೆ 17ರ ಮುಖಂಡ ಸುಭಾಷ್ ಮಾಳಿಕೇರಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ, ಯುವಜನತೆ, ಸಾಮಾಜಿಕ ಜಾಗೃತಿ ಹಾಗೂ ಜನಪರ ವಿಚಾರಗಳ ಕುರಿತು ನೀಡಿದ ಸಂದೇಶವನ್ನು ಕಾರ್ಯಕರ್ತರು ಗಮನವಿಟ್ಟು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹೇಶರೆಡ್ಡಿ ಮುದ್ನಾಳ್, ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ದೇಶದ ಜನರನ್ನು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗಿಯಾಗಲು ಪ್ರೇರೇಪಿಸುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಪ್ರಧಾನ ಕಾರ್ಯದರ್ಶಿ ರಮೇಶ್ ದೊಡ್ಡಮನಿ, ಗೋಪಾಲ ದಾಸನಕೇರಿ, ಮಲ್ಲಿಕಾರ್ಜುನ ಕುರುಕುಂಬಳ, ಸ್ವಾಮಿದೇವ ದಾಸನಕೇರಿ, ಶ್ರೀನಾಥ್ ಜೈನ್, ಚನ್ನಯ್ಯ ಮಾಳಿಕೇರಿ, ಸತೀಶ್ ಮಾಳಿಕೇರಿ, ರಾಠೋಡ, ತಿಪ್ಪಣ್ಣ, ಚನ್ನವೀರಯ್ಯ ಸ್ವಾಮಿ, ಭೀಮಬಾಯಿ ಸೆಂಡಗಿ, ಆಂಜನೇಯ ಬಬಲಾದಿ, ಶ್ರೀಕಾಂತ ಸುಂಗಲ್ಕರ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Suddi Belaku