
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದಾನ ಸಾಬ್, ಜಿಲ್ಲಾ ಖಜಾಂಜಿ ನಾಗಪ್ಪ ಮಾಲಿ ಪಾಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲಿಕಾರ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಖಜಾಂಜಿ ನಾಗಪ್ಪ ಮಾಲಿ ಪಾಟೀಲ್, ಸಮಾಜದಲ್ಲಿ ನೊಂದವರು, ಶೋಷಿತರು ಹಾಗೂ ವಂಚಿತರ ಪರವಾಗಿ ಸಂಘಟನೆಗಳು ಧ್ವನಿಯಾಗಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಕೆಲಸ ಮಾಡುವುದು ಸಂಘಟನೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಪತ್ರಿಕೋದ್ಯಮವು ಸಮಾಜದ ಕನ್ನಡಿ. ಜನರ ಸಮಸ್ಯೆಗಳನ್ನು ಸರ್ಕಾರ ಮತ್ತು ಆಡಳಿತದ ಗಮನಕ್ಕೆ ತರುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ತಿತರಿದ್ದರು.











Leave a Reply