ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್
ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆ ನೀಡಿರುವ ಅವರು,
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಎ.ಸಿ. ಕಾಡ್ಲೂರು ಅವರು,
ಪಕ್ಷ ನಿಷ್ಠೆ ಸಂಘಟನೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನೀಡಿರುವ ಸುದೀರ್ಘ ಕೊಡುಗೆಯನ್ನು ಪರಿಗಣಿಸಿ ಎಮ್ ಎಲ್ ಸಿ ಅವಕಾಶ ನೀಡಬೇಕೆಂದು ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ಜನತೆ ಆಸೆಯಾಗಿದೆ ಎಂದರು.

ಎ. ಸಿ.ಕಾಡ್ಲೂರ್ ಅವರು ಮುಸ್ಲಿಂ ಸಮೂದಾಯದ ಪ್ರಭಾವಿ ನಾಯಕರಾಗಿದ್ದು, ಸಮೂದಾಯದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದಾರೆ ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಹೊಂದಿರುತ್ತಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಮತ್ತು ಹಿಂದುಳಿದ ವರ್ಗಗಳ ಏಳಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಕಾಡ್ಲೂರ್ ಅವರ ಸುದೀರ್ಘ ಸೇವೆಯನ್ನು ಗುರುತಿಸಿ, ಮೇಲ್ಮನೆಗೆ ಆಯ್ಕೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

Suddi Belaku