ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಮೃತಪಟ್ಟ ಮೂವರು ಕಾರ್ಮಿಕರ ಶವಪರೀಕ್ಷೆ ನಂತರ ಬುಧವಾರ ತಡರಾತ್ರಿ ಅವರವರ ಕುಟುಂಬಸ್ಥರಿಗೆ ಶವಗಳನ್ನು ರವಾನಿಸಲಾಗಿದ್ದು, ಇಬ್ಬರ ಮೃತದೇಹಗಳನ್ನು ಮಧ್ಯಪ್ರದೇಶದ ತಮ್ಮ ಸ್ವತಃ ಊರು ಹಾಗೂ ಇನ್ನೊಬ್ಬರ ಶವವನ್ನು ತೆಲಂಗಾಣ ರಾಜ್ಯದ ಅಲ್ಲಂಪಲ್ಲಿಗೆ ತೆಗೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Suddi Belaku