
ಸುದ್ದಿ ಬೆಳಕು ವಾರ್ತೆ
ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ, ಗ್ರಾಮ ಪಂಚಾಯಿತಿ ಚಟ್ನಳ್ಳಿ ಹಾಗೂ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟ ಚಟ್ನಳ್ಳಿ ಇವರ ಆಶ್ರಯದಲ್ಲಿ ಆ.10ರಂದು ಚಟ್ನಳ್ಳಿ ಗ್ರಾಮದ ಡಾ.ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ ವಾರ್ಷಿಕ ಮಹಾಸಭೆಯಲ್ಲಿ ವಿಬಿ-ಜಿರಾಮಜಿ ಯೋಜನೆಯ ಮಾಹಿತಿಯುಳ್ಳ ಕರ ಪತ್ರಗಳ ಬಿಡುಗಡೆ ಮಾಡಿ ಮಾತನಾಡಿದರು.
ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಟಿತಗೊAಡು ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುತ್ತಿಲ್ಲವೆಂದು ಕಾರ್ಮಿಕರು ಕೆಲಸಕ್ಕಾಗಿ ನಗರಗಳಿಗೆ ವಲಸೆ ಹೊಗುವುದನ್ನು ತಡೆಯಲು ಸರಕಾರ ವಿಬಿ-ಜಿರಾಮಜಿ ಯೋಜನೆಯಡಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸಲು ನೀಡಿದ ನಿರ್ದೇಶನದಂತೆ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದ ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ ಎಂದು ಹೇಳಿದರು.
ವಿಬಿ-ಜಿರಾಮ್ ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಸೌಲಭ್ಯ ಸೇರಿ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗುತ್ತಿದೆ. ಅಲ್ಲದೇ, ಕೂಲಿ ಪಾವತಿಯಲ್ಲಿ ವಿಳಂಬವಾಗದAತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಗ್ರಾಮ ಪಂಚಾಯಿತಿಯ ವಿಬಿ-ಜಿರಾಮಜಿ ಯೋಜನೆಯ ತಂತ್ರಾAಶದಲ್ಲಿ ನೋಂದಾಯಿತ ಎಲ್ಲಾ ಕಾರ್ಮಿಕರ ಗ್ಯಾರಂಟಿ ರೋಜಗಾರ ಕಾರ್ಡ್ಗಳಿಗೆ ಕಡ್ಡಾಯವಾಗಿ ಇ-ಕೆವೈಸಿ, ಫೇಸ್ ಅಥೆಂಟಿಕೆಷನ್ ಪೂರ್ಣಗೊಳಿಸಿ, ನಿರಂತರ ಉದ್ಯೋಗ ಒದಗಿಸುವ ಮೂಲಕ ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು,
ವಿಬಿ-ಜಿರಾಮಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಪ್ರತಿ ವರ್ಷ 125 ದಿನಗಳ ನಿರಂತರ ಉದ್ಯೋಗ ಹಾಗೂ ಪ್ರತಿ ದಿನ 382 ರೂ, ಗಂಡು-ಹೆಣ್ಣಿಗೆ ಸಮಾನ ಕೂಲಿ ನೀಡಲಾಗುತ್ತಿದೆ. ಅಲ್ಲದೇ, ಗ್ಯಾರಂಟಿ ರೋಜಗಾರ ಕಾರ್ಡ್ ಪಡೆದ ಕುಟುಂಬಗಳಿಗೆ 5 ಲಕ್ಷ ರೂ.ಮಿತಿಗೊಳಪಟ್ಟು ಕೃಷಿ ಹೊಂಡ, ದನಗಳ ಶೆಡ್, ಮೇಕೆ ಶಡ್, ಹಂದಿ ಶಡ್, ಕೋಳಿ ಶೆಡ್, ತೋಟಗಾರಿಕೆ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಲು ಆರ್ಥಿಕ ಸಹಾಯಧನ ಅವಕಾಶವಿದ್ದು, ಗ್ರಾಮೀಣ ಕುಟುಂಬಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಮಾಹಿತಿ ನೀಡಿದರು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಟ 500 ಜನ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸಿ, ನೀಡಿದ ನಿಗದಿತ ಗುರಿಗೆ ಅನುಗುಣವಾಗಿ ಮಾನವ ದಿನಗಳ ಸೃಜನೆ ಸಾಧಿಸಬೇಕು, ಯೋಜನೆಯಡಿ ಉದ್ಯೋಗ ಬಯಸಿದವರು ಉದ್ಯೋಗದಿಂದ ವಂಚಿತರಾಗಬಾರದು. ಗ್ರಾಮ ಮಟ್ಟದಲ್ಲಿ ಮನೆ-ಮನೆಗೆ ತೆರಳಿ ಯೋಜನೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಉದ್ಯೋಗ ಬಯಸುವ ಎಲ್ಲ ಕುಟುಂಬಗಳನ್ನು ವಿಬಿ-ಜಿರಾಮಜಿ ಯೋಜನೆಯ ಕಾಮಗಾರಿಗಳಲ್ಲಿ ಸಕ್ರಿಯವಾಗಿ ತೋಡಗಿಸಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿವಾರು ಕೂಲಿ ಕಾರ್ಮಿಕರ ಉದ್ಯೋಗ ಬೇಡಿಕೆ ನೋಂದಣಿ, ಕಾಮಗಾರಿಗಳ ಯೋಜನೆ ಹಾಗೂ ಕಾರ್ಮಿಕರ ಹಾಜರಾತಿಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ಉದ್ಯೋಗದ ನಿರಂತರತೆಯನ್ನು ಕಾಪಾಡಲಾಗುತ್ತಿದೆ ಎಂದರು.
ಈ ವೇಳೆ ಚಟ್ನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಮತಿ ಲಕ್ಷಿಭಾಯಿ ಪಾಟೀಲ, ಯಾದಗಿರಿ ಜಿಲ್ಲಾ ಪಂಚಾಯಿತಿ ಎನ್‌ಆರ್‌ಎಲ್‌ಎಂ ಜಿಲ್ಲಾ ವ್ಯವಸ್ಥಾಪಕ ಗಿರೀಶ್ ಎಂ, ವಿಬಿ-ಜಿರಾಮಜಿ ಯೋಜನೆಯ ತಾಂತ್ರಿಕ ಸಹಾಯಕ ಆಶಿಫ್, ಐಇಸಿ ಸಂಯೋಜಕ ಬಸಪ್ಪ, ಶಹಾಪುರ ತಾಲೂಕ ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಗ್ರಾಪಂ ಸಿಬ್ಬಂದಿಗಳು ಹಾಗೂ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಗ್ರಾಮಸ್ಥರು ಇದ್ದರು.











Leave a Reply