
ಸುದ್ದಿ ಬೆಳಕು ವಾರ್ತೆ
ಶಹಾಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರನ್ನು ಸನ್ಮಾನಿಸಲಾಯಿತು.
ಸಂಘದ ಪದಾಧಿಕಾರಿಗಳು ಶಾಸಕರಿಗೆ ಶಾಲು ಹೊದಿಸಿ, ಹಾರ ಹಾಕಿ ಗೌರವಿಸಿದರು. ಬಳಿಕ ಪತ್ರಕರ್ತರ ಸಂಘಟನೆಯ ಚಟುವಟಿಕೆಗಳು ಹಾಗೂ ಪತ್ರಕರ್ತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕೆಲಸ ಮಾಡುತ್ತಿದ್ದಾರೆ. ಪತ್ರಕರ್ತರ ಸಮಸ್ಯೆಗಳ ಕುರಿತು ಗಮನಹರಿಸಿ, ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ಪತ್ರಕರ್ತರು ವಸ್ತುನಿಷ್ಠ ಹಾಗೂ ಜನಪರವಾಗಿ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಹೇಳಿದರು.
ಸಂಘದ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ, ಜಿಲ್ಲಾ ಉಪಾಧ್ಯಕ್ಷ ದಿನೇಶ್ ವಿ.ಸಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದಾನಸಾಬ್, ಖಜಾಂಜಿ ನಾಗಪ್ಪ ಮಾಲಿ ಪಾಟೀಲ್, ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲ್ಲಿಕಾರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.











Leave a Reply