ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ ತಿಳಿಸಿದರು.

ಪತ್ರಕರ್ತರ ಹಿತಾಸಕ್ತಿಗೆ ತಮ್ಮಿಂದಾದ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸಂಘದ ವತಿಯಿಂದ ನೀಡಿದ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದ ಶಾಸಕರು, ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಿಗೆ ಮಾಧ್ಯಮಗಳು ಆದ್ಯತೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ, ಜಿಲ್ಲಾ ಉಪಾಧ್ಯಕ್ಷ ದಿನೇಶ್ ವಿ.ಸಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದಾನಸಾಬ್, ಖಜಾಂಚಿ ನಾಗಪ್ಪ ಮಾಲಿ ಪಾಟೀಲ್, ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲ್ಲಿಕಾರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Suddi Belaku