
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ನಗರದ ಹುಲಿಗೆಪ್ಪ ಶಾಲೆಯ ಆವರಣದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ಅಕ್ಕ ಪಡೆಯ ಅಧಿಕಾರಿ ಸುನೀತಾ ಚವ್ಹಾಣ ಅವರು ಮಹಾತ್ಮ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಿಜೆಪಿ ಮುಸ್ಲಿಂ ಸಮುದಾಯದ ರಾಜ್ಯ ಕಾರ್ಯದರ್ಶಿ ಹೆಚ್. ಕೆ. ಕುರುಕುಂದ ಪಟೇಲ್ ಅವರು ಮಾತನಾಡಿ, “ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ತಿಳಿದುಕೊಳ್ಳಬೇಕು ಮತ್ತು ಪ್ರತಿಯೊಬ್ಬರಲ್ಲೂ ದೇಶಭಕ್ತಿ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬುಡಕಟ್ಟು ಜನಾಂಗದ ಅಧ್ಯಕ್ಷರಾದ ರಮೇಶ ಹಾಗೂ ಹುಲಿಗೆಪ್ಪ ಶಾಲೆಯ ಪ್ರಾಂಶುಪಾಲರಾದ ಆನಂದ ಕಾಡ್ಲೂರ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಮಲ್ಲಪ್ಪ ಯಡ್ಡಳ್ಳಿ, ಹೇಮಲತಾ, ರೇಖಾ, ಬಸಮ್ಮ, ಸುವರ್ಣ, ಕುಮಾರಿ ಜ್ಯೋತಿ, ಬಸವರಾಜ, ಅಸ್ಮಾ, ಲಕ್ಷ್ಮಿ, ಸೋಯಲಾ, ಕುಮಾರಿ ಆಸ್ಮ, ಕುಮಾರಿ ಮಹ್ಮದ್ ಫಾತಿಮಾ, ಕುಸುಮಾವತಿ, ಕೌಸರ್, ಇಮಾನ್ ವೆಲ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.












Leave a Reply