
ಸುದ್ದಿ ಬೆಳಕು ವಾರ್ತೆ
ಲಿಂಗಸುಗೂರು/ಯಾದಗಿರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಮ್ಮಿಕೊಂಡಿರುವ ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಉದ್ಘಾಟನಾ ಬೃಹತ್ ಸಮಾವೇಶವು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಅದ್ದೂರಿಯಾಗಿ ಜರುಗಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ಯುವ ಮುಖಂಡರು ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಶ್ರೀ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ಸಕ್ರಿಯವಾಗಿ ಪಾಲ್ಗೊಂಡು ಸರ್ಕಾರದ ವಿರುದ್ಧದ ಹೋರಾಟಕ್ಕೆ ಬಲವಾದ ಬೆಂಬಲ ಸೂಚಿಸಿದರು.

ಸಮಾವೇಶದಲ್ಲಿ ಮಾತನಾಡಿದ ಮುಖಂಡರು, “ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ದಲಿತ ವಿರೋಧಿ ಹಾಗೂ ಅಭಿವೃದ್ಧಿ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈ ಜನವಿರೋಧಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಬಿಜೆಪಿಯ ಈ ಜನಾಕ್ರೋಶದ ಹೋರಾಟ ನಿರಂತರವಾಗಿ ಮುಂದುವರಿಯಲಿದೆ,” ಎಂದು ಗುಡುಗಿದರು.

ಈ ಬೃಹತ್ ಸಮಾವೇಶದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಹಿರಿಯ ನಾಯಕ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿ.ಟಿ. ರವಿ, ಮಾಜಿ ಸಚಿವ ಬಿ. ಶ್ರೀರಾಮುಲು, ಶಾಸಕರಾದ ಜನಾರ್ದನ ರೆಡ್ಡಿ, ಬಸವರಾಜ ಮತ್ತಿಮಡು, ಅರವಿಂದ ಬೆಲ್ಲದ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಯಾದಗಿರಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಸೇರಿದಂತೆ ರಾಜ್ಯ ಹಾಗೂ ಸ್ಥಳೀಯ ಮಟ್ಟದ ನೂರಾರು ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.












Leave a Reply