
ಸುದ್ದಿ ಬೆಳಕು ವಾರ್ತೆ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಣ ವಿಭಾಗದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡಲಾಗುವ *“ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ”*ಗೆ ಹತ್ತಿಕುಣಿ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ನಾಗರಾಜ್ ಭಾಸ್ಕರ್ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಸೆಪ್ಟೆಂಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಭಾರತ್ ಜೋಡೋ ಸಭಾಂಗಣದಲ್ಲಿ ನಡೆಯಿತು. ಗಣ್ಯರು ಹಾಗೂ ಶಿಕ್ಷಣ ಕ್ಷೇತ್ರದ ಪ್ರಮುಖರ ಸಮ್ಮುಖದಲ್ಲಿ ನಾಗರಾಜ ಭಾಸ್ಕರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ನಾಗರಾಜ ಭಾಸ್ಕರ ಅವರು ಸಲ್ಲಿಸಿರುವ ಸೇವೆ ಹಾಗೂ ಕೊಡುಗೆಯನ್ನು ಗುರುತಿಸಿ ಈ ಪ್ರತಿಷ್ಠಿತ ರಾಜ್ಯ ಮಟ್ಟದ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಅವರ ಈ ಸಾಧನೆಗೆ ಶಿಕ್ಷಣ ಪ್ರೇಮಿಗಳು, ಸ್ನೇಹಿತರು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.












Leave a Reply