ಬಿಜೆಪಿ ಬಳ್ಳಾರಿ ಪಾದಯಾತ್ರೆಯಿಂದ ಕಾಂಗ್ರೆಸ್‌ನಲ್ಲಿ ನಡುಕ : ನಾಯಕ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೆಲ ಸಚಿವರು ನಡೆಸಿದ ಭ್ರಷ್ಟಾಚಾರದ ವಿರುದ್ಧ, ರಾಜ್ಯದಲ್ಲಿ ಉದ್ಭವಿಸಿರವ ಭೀಕರ ಬರಗಾಲ, ಅಭಿವೃದ್ಧಿ ಕಾರ್ಯಗಳ ಹಿನ್ನಡೆ ಪ್ರಸ್ತಾಪಿಸಿ ಬಿಜೆಪಿ ನಡೆಸುತ್ತಿರುವ ಬಳ್ಳಾರಿ ಪಾದಯಾತ್ರೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ನಡುಕ ಉಂಟಾಗಿದೆ ಎಂದು ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ನಾಯಕ ರಾಮಸಮುದ್ರ ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬಳ್ಳಾರಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಬಿ.ನಾಗೇಂದ್ರ ಅವರು ವಾಲ್ಮೀಕಿ ನಿಗಮದ 187 ಕೋಟಿ ರೂ. ಅನುದಾನವನ್ನು ಕಾಂಗ್ರೆಸ್ ಹೈ ಕಮಾಂಡ್ ನಾಯಕರ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಸೂಚನೆ ಮೇರೆಗೆ ಹಣ ದುರ್ಬಳಕೆ ಮಾಡಿಕೊಂಡು ನೆರೆಯ ತೆಲಂಗಾಣ ರಾಜ್ಯದ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಖರ್ಚು ಮಾಡಲು ಬಳಸಿ ವಾಲ್ಮೀಕಿ ಸಮಾಜಕ್ಕೆ ಅನ್ಯಾಯ ಮಾಡಿದರು, 3 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಜನರಿಗೆ ತಲುಪುತ್ತಿಲ್ಲ,
ಗೃಹಲಕ್ಷಿö್ಮÃ ಯೋಜನೆಯಡಿಯಲ್ಲಿ ಕೂಡ ಅನುದಾನ ದುರ್ಬಳಕೆಯಾಗಿದೆ, ಅಭಿವೃದ್ಧಿ ಕಾರ್ಯಗಳು ಶೂನ್ಯ, ಭ್ರಷ್ಟಾಚಾರ ಆಡಳಿತ ನಡೆಸುತ್ತಿದ್ದಾರೆ, ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಡಿಕೆಶಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಯಿತು, ರಾಜ್ಯದಲ್ಲಿ ಭೀಕರ ಬರಗಾಲ ಉದ್ಘವಿಸಿದೆ, ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ, ಇದನ್ನು ಖಂಡಿಸಿ ನಡೆಸುತ್ತಿರುವ ಪಾದಯಾತ್ರೆಯಿಂದ ಜನರಲ್ಲಿ ಜಾಗೃತಿ ಮೂಡಿದೆ, ಬಿಜೆಪಿ ಸಂಘಟನೆಯ ಆನೆ ಬಲ ತಂದಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊAಡರು.
ಕೆಪಿಎಸ್‌ಸಿ ಹಗರಣದಲ್ಲಿ ಪ್ರಭಾವಿ ಸಚಿವರ ಹೆಸರು ಕೇಳಿ ಬರುತ್ತಿದೆ, ಅದರ ಸಂಪೂರ್ಣ ತನಿಖೆಗೆ ಪಕ್ಷ ಆಗ್ರಹಿಸಿದೆ, ಡಿಕೆಶಿ ಸಚಿವ ಸಂಪುಟದಲ್ಲಿರುವ ಹಲವಾರು ಸಚಿವರಿಗೆ ಭಯ ಮೂಡಿದೆ, ಬರಗಾಲ ಘೋಷಣೆಯಲ್ಲಿಯೂ ಕೂಡ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ, ರೈತರಿಗೆ ನ್ಯಾಯ ಒದಗಿಸಲು ನಾವೇಲ್ಲರೂ ಬಿವೈವಿ ನೇತೃತ್ವದಲ್ಲಿ ಸಹಸ್ರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದೇವೆ, ಬರುವ ದಿನಗಳಲ್ಲಿ ಸರ್ಕಾರದ ನಿಜಬಣ್ಣ ಬಯಲಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶ್ರೀಧರ ಸಾಹುಕಾರ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku