ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆಗೂ ಆದ್ಯತೆ ನೀಡಿ : ಶಾಸಕ ತುನ್ನೂರ್

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವೆ ಪಾಠಕ್ಕೆ ಸೀಮಿತವಾಗದೆ ಪಠ್ಯದ ಜೊತೆ ಕ್ರೀಡೆಗೂ ಪ್ರಾತಿನಿಧ್ಯ ನೀಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 2026-27 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಹ, ಆರೋಗ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗುತ್ತದೆ.
ಮಕ್ಕಳು ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು.
ಪಠ್ಯದ ಜತೆಗೆ, ಆಟೋಟದಲ್ಲೂ ಮಕ್ಕಳು ಪ್ರತಿಭೆ ತೋರಬೇಕು. ಸದೃಢ ಶರೀರದಲ್ಲಿ ಸದೃಢ ಮನಸ್ಸಿರುತ್ತದೆ ಪುಸ್ತಕದ ಜ್ಞಾನದಿಂದ ಇಂದು ಏನೂ ಸಾಧನೆ ಮಾಡಲಾಗದು. ಪಠ್ಯೆತರ ವಿಷಯಗಳನ್ನು ಮಕ್ಕಳು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೈಹಿಕವಾಗಿ ಸಬಲರಾಗಲು ಮತ್ತು ಪ್ರಶಸ್ತಿಗಳನ್ನು ಗೆಲ್ಲಲು ಸರ್ಕಾರ ಕ್ರೀಡಾಕೂಟ ಆಯೋ ಜನೆ ಮಾಡಿ ಪ್ರೇರೆಪಿಸುತ್ತಿದೆ ಎಂದರು. ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳು ಒಂದಲ್ಲ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಅಸಕ್ತಿ ಇರುತ್ತದೆ. ಅದನ್ನು ಗುರುತಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ ಎಂದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆಲ್ಲುವ ಗುರಿ ಹೊಂದಬೇಕು. ಶಿಕ್ಷಣದ ಅವಿಭಾಜ್ಯ ಅಂಗ ಕ್ರೀಡೆಯಾಗಿದೆ.ಸೋಲು-ಗೆಲುವ ಸಾಮಾನ್ಯ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಸೋತವರು ಹತಾಶರಾಗಬಾರದು ಮುಂದಿನ ಸಲ ಗೆಲ್ಲುವತ್ತ ಗುರಿ ಇಟ್ಟುಕೊಳ್ಳಬೇಕೆಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುದೀಪ್ ಟಿ.ಸಿ.,ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ರುದ್ರಗೌಡ ಮಾಲಿಪಾಟೀಲ್, ಮಲ್ಲಣ್ಣಗೌಡ ಪಾಟೀಲ್, ಶರಣಪ್ಪ ರಾಹುಲ್,ದಶರಥ ಕೆ., ಶ್ರೀಶೈಲ್, ಓಂಕಾರರೆಡ್ಡಿ, ಜಿ.ಎಸ್
ವಿಶ್ವಕರ್ಮ ಮತ್ತು ಮಹಾಂತೇಶ ಕಲಾಲ, ಡಾ
ರವೀಂದ್ರನಾಥ ಹೊಸಮನಿ ಭಾಗವಹಿಸಿದ್ದರು.
ವಿವಿಧ ಕ್ರೀಡಾಕೂಟಗಳು ಜರುಗಿದವು.ನೂರಾರು ಮಕ್ಕಳು ಭಗವಹಿಸಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku