ಹುಣಸಗಿ ಕೊಡೇಕಲ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

Posted by

ಸುದ್ದಿ ಬೆಳಕು ವಾರ್ತೆ

ಹುಣಸಗಿ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣಾ ಅಭಿಯಾನದ ಅಂಗವಾಗಿ ತಾಲೂಕಿನ ಕೊಡೇಕಲ್ ಹೋಬಳಿಯ ಕೊಡೇಕಲ್ ಗ್ರಾಮದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಸಿ ಸಾರ್ವಜನಿಕರು ಹಾಗೂ ಅರ್ಹ ಯುವ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಕೊಡೇಕಲ್ ಗ್ರಾಮ ಪಂಚಾಯಿತಿ ಆವರಣದಿಂದ ಆರಂಭಗೊಂಡ ಬೈಕ್ ರ‍್ಯಾಲಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ಮಾಡಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ 18 ವರ್ಷ ಪೂರೈಸಿದ ಅರ್ಹ ಯುವ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ಹಾಗೂ ತಹಸೀಲ್ದಾರ್ ಎನ್. ಬಸವರಾಜ ಅವರ ನೇತೃತ್ವದಲ್ಲಿ ರ‍್ಯಾಲಿ ನಡೆಯಿತು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ವಿಬಿಜಿ ರಾಮ್ ಜಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku