ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

Posted by

ಸುದ್ದಿ ಬೆಳಕು ವಾರ್ತೆ

ವಡಿಗೇರಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ‘ಸ್ವೀಪ್’ ವತಿಯಿಂದ ವಿಶೇಷ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಶಶಿಧರ ಹೀರೆಮಠ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ತಾಲ್ಲೂಕ ಪಂಚಾಯತಿ ಕಚೇರಿ ಮುಂಭಾಗದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ ಬೈಕ್ ರ‍್ಯಾಲಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು, ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು,

ವಿಶೇಷ ಮತದಾರರ ನೋಂದಣಿ ಅಭಿಯಾನದ ಮೂಲಕ ಅರ್ಹ ಯುವ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ನಾಗರಿಕರು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಆಕ್ಷೇಪಣೆ ಹಾಗೂ ತಿದ್ದುಪಡಿ ಮಾಡಿಸಲು ಅವಕಾಶವಿದ್ದು, ಇದರ ಸದುಪಯೋಗವನ್ನು ಮತದಾರರು ಪಡೆದುಕೊಳ್ಳಲು ಕರೆ ನೀಡಿದರು.

ತಹಶೀಲ್ದಾರ್ ಮಂಗಳ ಅವರು ಮಾತನಾಡಿ, ‘ಅರ್ಹ ನಾಗರಿಕರ ಹೆಸರನ್ನು ಸೇರಿಸಲು ಮತ್ತು ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಎಸ್‌ಐಆರ್ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ, ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬಹುದು. ನಿಗದಿತ ಸಮೂನೆ ಪಡೆದು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದುಹಾಕಲು ಹಾಗೂ ತಿದ್ದುಪಡಿಗಳು ಮತ್ತು ವಿಳಾಸ ಬದಲಾವಣೆ ಮಾಡಿಸಬಹುದು’ ಎಂದು ಮಾಹಿತಿ ನೀಡಿದರು.

ಈ ವೇಳೆ ಸಹಾಯಕ ‌ನಿರ್ದೇಶಕರು ಶ್ರೀ ಕಿರಾಣಬಾಬು, ಪಿಡಿಒ ಬಿ ಆರ್ ಪಾಟೀಲ್, ಶೇಶಿಗಿರಿ ರಾವ್ , ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎನ್ ಓ ಶರ್ಮೋದಿನ್, ಟಿಎಮ್ ಐಎಸ್ ಮಲ್ಲಿಕಾರ್ಜುನ ಹಾಗೂ ತಾಲ್ಲೂಕು ಪಂಚಾಯತಿ, ಗ್ರಾಪಂ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿಬಿ-ಜಿ ರಾಮ ಜಿ ಯೋಜನೆಯ ಸಿಬ್ಬಂದಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

You Might Also Like

Leave a Reply

Your email address will not be published. Required fields are marked *

Suddi Belaku