
ಯಾದಗಿರಿ, ಏಪ್ರಿಲ್ 13: ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಒಂದು ದಿನ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಈ ಕುರಿತು ಆದೇಶ ನೀಡಿದ್ದು, ಏಪ್ರಿಲ್ 14ರ ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಈ ಆದೇಶವು ಜಿಲ್ಲೆಯಾದ್ಯಂತ ಅನ್ವಯವಾಗಿದ್ದು, ಬಾರ್ ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಎಲ್ಲಾ ಮದ್ಯ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮದ್ಯ ತಯಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಗೂ ಈ ಅವಧಿಯಲ್ಲಿ ನಿರ್ಬಂಧ ವಿಧಿಸಲಾಗಿದೆ.
ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಜಿಲ್ಲಾಧಿಕಾರಿಗಳು ಈ ಆದೇಶ ಜಾರಿಗೊಳಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಅಂಬೇಡ್ಕರ್ ಜಯಂತಿ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ದೊಡ್ಡ ಪ್ರಮಾಣದ ಸಾರ್ವಜನಿಕ ಸಮಾರಂಭಗಳು ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಷೇಧ ವಿಧಿಸಲಾಗಿದೆ.










Leave a Reply