ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ 2ನೇ ಭಾರಿಗೆ ಬಸರಡ್ಡಿ ಮಾಲಿ ಪಾಟೀಲ್ ಅನಪೂರ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಈ ಮೊದಲು ಅಧ್ಯಕ್ಷರಾಗಿದ್ದ ಅನಪೂರ, ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಸಧೃಢವಾಗಿ ಕಟ್ಟುವ ಮೂಲಕ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿ, ಹೈಕಮಾಂಡ್ ಗಮನ ಸೆಳೆದಿದ್ದರು, ಅವರ ಕಾರ್ಯವೈಖರಿಯನ್ನು ಗಮನಿಸಿದ ಪಕ್ಷದ ನಾಯಕರು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಜವಾಬ್ದಾರಿ ಮುಂದುವರೆಸಿಕೊAಡು ಹೋಗಲು ಅವಕಾಶ ಕಲ್ಪಿಸಿದ್ದಾರೆ.
ಈ ಪತ್ರಿಕೆಯೊಂದಿಗೆ ಮಾತನಾಡಿದ ಅನಪೂರ, ನಾನು ಪಕ್ಷ ಸಂಘಟನೆಗೆ ಮೊದಲು ಆದ್ಯತೆ ನೀಡಿಕೊಂಡು ಬಂದಿದ್ದೇನೆ, ಬರುವ ದಿನಗಳಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ, ಕ್ರೀಯಾಶೀಲ ತಂಡ ರಚನೆ ಮಾಡಿ, 2028ರ ವಿಧಾನಸಭಾ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಲು ಯತ್ನಿಸುವ ಮೂಲಕ ಹಿರಿಯ ನಾಯಕರ, ಕಾರ್ಯಕರ್ತರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

You Might Also Like

Leave a Reply

Your email address will not be published. Required fields are marked *

Suddi Belaku