by
Category: ಪ್ರಮುಖ ಸುದ್ದಿ(Top Stories)
top news articles

ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ
ರಾಜಧನ ಪದ್ಧತಿ ಸರಳೀಕರಣಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಮೂರನೇ ದಿನವೂ ಬಂದ್ | ಲಕ್ಷಾಂತರ ಕಾರ್ಮಿಕರಿಗೆ ಕೆಲಸವಿಲ್ಲ, ನಿರ್ಮಾಣ ಕಾಮಗಾರಿಗಳಿಗೂ ಹೊಡೆತ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬೆಳಗ್ಗೆ ಕೆಲಸಕ್ಕೆ ಹೋಗಿ ಸಂಜೆ ಕೂಲಿ ಪಡೆದು ಮನೆಗೆ ಅಡುಗೆ ಮಾಡುತ್ತಿದ್ದ ಸಾವಿರಾರು ಕುಟುಂಬಗಳ ಬದುಕಿಗೆ ಕಲ್ಲು ಕ್ವಾರಿ ಮತ್ತು ಕ್ರಷರ್ ಘಟಕಗಳ ಬಂದ್ ದೊಡ್ಡ ಹೊಡೆತ ನೀಡಿದೆ. ಏಕಮುಖ ರಾಜಧನ ಪದ್ಧತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್…

ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಕಲಬುರಗಿ : “ಬೆಂಗಳೂರು ನಾಡಿನ ಕಿರೀಟವಾದರೆ, ಜಗಜ್ಯೋತಿ ಬಸವೇಶ್ವರರ ಕರ್ಮಭೂಮಿ ಹಾಗೂ ಸಾಮಾಜಿಕ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕವು ರಾಜ್ಯದ ನೈಜ ಶಕ್ತಿಪೀಠವಿದ್ದಂತೆ. ಕಲ್ಯಾಣದ ನಿಜವಾದ ಕಲ್ಯಾಣವೇ ನಮ್ಮ ಸರ್ಕಾರದ ಮೂಲ ಮಂತ್ರವಾಗಿದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು. ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಅವರು…

ಬಿಸಿಲಿನ ತಾಪಕ್ಕೆ ತತ್ತರಿಸಿದ ಜಾನುವಾರುಗಳು..!
ಮಳೆ ಕೊರತೆ, ಮೇವು-ನೀರಿನ ಅಭಾವದಿಂದ ಮೂಕ ಪ್ರಾಣಿಗಳ ಪರದಾಟ; ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹ ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ ಎದುರಾಗಿದೆ. ನಗರದ ಅಂಬೇಡ್ಕರ್ ವೃತ್ತದ ಮುಖ್ಯರಸ್ತೆ ಪಕ್ಕದಲ್ಲಿರುವ ಶಕ್ತಿಮಾತೆ ಗಾಳಿ ಮರಗಮ್ಮ ದೇವಸ್ಥಾನದ ಆವರಣದಲ್ಲಿನ ದೊಡ್ಡ ಬಸವ ಮರದ ಕೆಳಗೆ ಜಾನುವಾರುಗಳು ಬಿಸಿಲಿನಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಗುರುವಾರ ಮಧ್ಯಾಹ್ನ 3…

ಯಾದಗಿರಿ ಬಂದ್ ಯಶಸ್ವಿ: 5 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲು ಸೆ.17ರ ಗಡುವು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಉಳಿದ 5 ತಾಲೂಕಗಳನ್ನು ಸಂಪೂರ್ಣ ಬರಪೀಡಿತ ಪ್ರದೇಶಗಳೆಂದು ಘೋಷಿಸುವದು ಹಾಗೂ ರಾಷ್ಟ್ರೀಯ ಬ್ಯಾಂಕ್ಗಳು, ಸಹಕಾರ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ನಡೆಸಿದ ಬಂದ್ ಯಶಸ್ವಿಯಾಗಿದೆ. ಬೆಳಗ್ಗೆಯಿಂದಲೇ ಸರ್ವ ಸಂಘಟನೆಗಳ ಹೋರಾಟ ಸಮಿತಿ ಮುಖಂಡರು, ಬೈಕ್ ಗಳ ಮೇಲೆ ಸಂಚರಿಸಿ ಅನ್ನದಾತನಿಗೆ ಆದ ಅನ್ಯಾಯದ ವಿರುದ್ಧ ಸಂಪೂರ್ಣ ಬಂದ್ ಮಾಡಿ ಬೆಂಬಲಿಸುವAತೆ ಮಾಡಿದ ಮನವಿಗೆ ಅಂಗಡಿ ಮುಂಗಟ್ಟುಕಾರರು ವ್ಯಾಪಾರ ವಹಿವಾಟು ಬಂದ್…

ಜಾಗತಿಕ ಶಿಕ್ಷಣದತ್ತ ಕರ್ನಾಟಕದ ವಿದ್ಯಾರ್ಥಿಗಳಿಗೆ ಅವಕಾಶ: ಡಿ.ಕೆ. ಶಿವಕುಮಾರ್
ಬೆಂಗಳೂರು : “ನಮ್ಮಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು. ಅವರು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗದಾತರಾಗಬೇಕು ಎಂಬುದು ನಮ್ಮ ಬಯಕೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ “ವಿದೇಶದಲ್ಲಿ ಅಧ್ಯಯನ 2026” ಕಾರ್ಯಕ್ರಮಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ದೇಶದ ಅಧ್ಯಯನಕ್ಕೆ ನಮ್ಮ ಸರ್ಕಾರ ಹೊಸ…

ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಕೇಸ್‌ಗಳಿಗೆ ಹೆದರಲ್ಲ: ಸಿಎಂ ಡಿಕೆಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹುಟ್ಟು ಹೋರಾಟಗಾರ. ಹೋರಾಟಗಾರನಾಗಿಯೇ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ಇಂತಹ ನೂರು ಸುಳ್ಳು ಮೊಕದ್ದಮೆಗಳನ್ನು ಹೂಡಿದರೂ ಗೊಡ್ಡು ಬೆದರಿಕೆಗಳಿಗೆ ಕಾಂಗ್ರೆಸ್ ಎಂದಿಗೂ ಹೆದರುವುದಿಲ್ಲ. ರಾಹುಲ್ ಗಾಂಧಿ ಅವರು ಬೇರೆಯವರಂತೆ ಮುಚ್ಚಳಿಕೆ ಪತ್ರ ಬರೆದುಕೊಡುವವರಲ್ಲ, ಕ್ಷಮೆ ಕೇಳುವವರೂ ಅಲ್ಲ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ. ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಾಖಂಡದಲ್ಲಿ ದುರುದ್ದೇಶಪೂರಿತವಾಗಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ,…

ಆರ್‌ಎಸ್‌ಎಸ್ ಪಥಸಂಚಲನ ವಿವಾದ: ಸರ್ಕಾರಿ ನೌಕರರು ಇತಿಮಿತಿಯಲ್ಲಿರಬೇಕು ಶರಣಪ್ರಕಾಶ ಪಾಟೀಲ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಆರ್.ಎಸ್ಸೆಸ್. ಪಂಥ ಸಂಚಲನ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು, ಸರ್ಕಾರಿ ನೌಕರಸ್ಥರು ತಮ್ಮ ಕಾರ್ಯದಲ್ಲಿ ಮಗ್ನರಾಗಿರಬೇಕೆ ಹೊತರು ಖಾಸಗಿ ಸಂಘಗಳ ಜೊತೆ ಬಹಿರಂಗವಾಗಿ ಕಾಣಿಸಿಕೊಳ್ಳಬಾರದು, ಸರ್ಕಾರಿ ನೌಕರಸ್ಥರು ಇತಿಮಿತಿಗಳಲ್ಲಿ ಇರಬೇಕೆಂದು ಹೇಳಿದರು. ಪ್ರಹ್ಲಾದ್ ಜೋಶಿ ಅವರು ಕೇಂದ್ರದಲ್ಲಿ ಗುರುತಿಸಲ್ಪಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾತಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನೈತಿಕತೆಯ ಹಿನ್ನೆಲೆಯಲ್ಲಿ ಸರ್ಕಾರ ನಡೆಸುತ್ತಿದೆ. ಈ ನೈತಿಕತೆ…

ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಮಡಿಕೇರಿ : “ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಕುಡಿಯುವ ನೀರು, ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡೇ ನಾವು ನಿರ್ಧಾರ ಕೈಗೊಳ್ಳಬೇಕು. ಉತ್ತಮ ಮಳೆಯಾಗಿ ಬೆಳೆ…

ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. “ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು…

‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಜೂನ್…
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ















