ಸುದ್ದಿ ಬೆಳಕು ವಾರ್ತೆ
ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದು ಸೂಕ್ತವಾಗಿದೆ.
ಶಾಸಕರಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಅತ್ಯಂತ ಕ್ರಿಯಾಶೀಲರಾಗಿ ಮಾಡುತ್ತಿರುವ ಅವರಿಗೆ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದಲ್ಲಿ ಇನ್ನು ಹೆಚಿನ ಕೆಲಸ ಮಾಡಲು ಸಹಕಾರಿಯಾಗುತ್ತದೆ.
ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಸೋನಿಯಾಗಾಂದಿ, ರಾಹುಲಗಾಂದಿ, ಪ್ರಿಯಾಂಕಾ ವಾಡ್ರಾ ಗಾಂದಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಅವರು ಈ ವಿಷಯಕ್ಕೆ ಒತ್ತು ಕೊಟ್ಟು ಜಿಲ್ಲೆಯ ನ್ಯಾಯ ಒದಗಿಸುವ ಮೂಲಕ ಶಾಸಕರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ಕೊಡಬೇಕೆಂದು ಒತ್ತಾಯದ ಮನವಿ ಮಾಡಿದ್ದಾರೆ.
ಸಂಪುಟದಲ್ಲಿ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಲು ಶಾಸಕ ತುನ್ನೂರರಿಗೆ ಕೆಕೆಆರ್‌ಡಿಬಿ ಕೊಡಿ: ಭೀಮುಪೂಜಾರಿ

Leave a Reply