
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ಜಿಲ್ಲಾ ನ್ಯಾಯಾಲಯದ 2026-27ನೇ ಸಾಲಿನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ನ್ಯಾಯವಾದಿ ದೇವಿಂದ್ರಪ್ಪ ಯರಗೋಳ ಅವರನ್ನು ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಅವರು ದೇವಿಂದ್ರಪ್ಪ ಯರಗೋಳ ಅವರನ್ನು ಸನ್ಮಾನಿಸಿ, ನೂತನ ಜವಾಬ್ದಾರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶ್ ರೆಡ್ಡಿ ಮುದ್ನಾಳ, ರಾಜ್ಯ ಬಿಜೆಪಿ ಮುಖಂಡೆ ನಾಗರತ್ನ ಕುಪ್ಪಿ, ಮಾಜಿ ಅಲೆಮಾರಿ ನಿಗಮದ ಅಧ್ಯಕ್ಷ ದೇವಿಂದ್ರನಾಥ್ ನಾದ, ಮಾಜಿ ಜಿಲ್ಲಾಧ್ಯಕ್ಷ ಡಾ. ಶರಣ ಭೋಪಾಲ್ ರೆಡ್ಡಿ ನಾಯ್ಕಲ್, ಜಿಲ್ಲಾ ಬಿಜೆಪಿ ವಕ್ತಾರ ಹನುಮಂತ ಇಟಗಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟರೆಡ್ಡಿ ಅಬ್ಬೆತುಮ್ಕೂರ್ ಹಾಗೂ ಸುರೇಶ್ ಚೌಹಾಣ್, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ವಡಿಗೇರಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ದೊಡ್ಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಗೋಪಾಲ್ ದಾಸನ್ ಕೇರಿ ಉಪಸ್ಥಿತರಿದ್ದರು.
ನಗರ ಕಾರ್ಯದರ್ಶಿಗಳಾದ ಲಕ್ಷ್ಮಿಪುತ್ರ ಮಾಲಿಪಾಟೀಲ, ನಗರ ಎಸ್‌ಟಿ ಮೋರ್ಚಾ ಅಧ್ಯಕ್ಷ ಸಾಬು ಬಗಲಿ, ನಾಗಪ್ಪ ಗಚ್ಚಿನಮನಿ, ಕಾಶಿರಾಯ್ ಚಿರಸಾಗರ್, ಜಿಲ್ಲಾ ಬಿಜೆಪಿ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಸೂರ, ಬಸವರಡ್ಡಿ ಬನ್ನಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ಚೌಹಾಣ್, ಶಕುಂತಲಾ, ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾಯಕ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಭೀಮಬಾಯಿ ಸೆಂಡಿಗಿ, ಸ್ನೇಹಾ ರಾಸೋಳಕರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.












Leave a Reply