
ಸುದ್ದಿ ಬೆಳಕು ವಾರ್ತೆ
ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು
ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.
ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಅದೇ ರೀತಿ ಈ ಭಾಗದ ವಿಶೇಷಚೇತನರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಶಹಾಪುರ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ಶಾರದಮ್ಮ, ಪುನರ್ವಸತಿ ಕಾರ್ಯಕರ್ತರು ನಾಗರಾಜ, ಕಾಂಗ್ರೆಸ್ ಮುಖಂಡರಾದ ಶರಣಗೌಡ ಬಲಕಲ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.










Leave a Reply