
ಸುದ್ದಿ ಬೆಳಕು ವಾರ್ತೆ
ಸೈದಾಪುರ: ವಾಸವಿ ಅಕಾಡೆಮಿಯಿಂದ ಯುಪಿಎಸ್ಸಿ ಪರೀಕ್ಷೆ ಎದುರಿಸುವವರಿಗೆ ಉಚಿತ ತರಬೇತಿ ನೀಡಲಾಗುವುದು, ಇದನ್ನು ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾಥಿಗಳು ಈ ಅವಕಾಶವನ್ನು ಸದೂಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯ ನಿರ್ದೇಶಕರಾದ ರಾಘವೇಂದ್ರ ಬಾದಾಮಿ ಮತ್ತು ಶ್ರೀನಿವಾಸ ಓಬಳ್ಳಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯು ಸಮಾಜದ ಸರ್ವಾಂಗಿಣ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿದೆ. ಅದರಂತೆ ವಾಸವಿ ಅಕಾಡೆಮಿಯ ಮೂಲಕ ಲೋಕಸೇವಾ ಆಯೋಗ ನಡೆಸುವ ಐಎಎಸ್, ಐಪಿಎಸ್ ಸೆರಿದಂತೆ ಕರ್ನಾಟಕ ಲೋಕ ಸೇವಾ ಆಯೋಗ ನಡೆಸುವ ವಿವಿಧ ಪರೀಕ್ಷೆಗಳನ್ನು ಬರೆಯಲು ಇಚ್ಚೆ ಇರುವವರಿಗೆ ಅತ್ಯತ್ತಮವಾದ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಪ್ರವೇಶ ಪರೀಕ್ಷೆಯನ್ನು ಜುಲೈ-19 ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ, ಊಟ, ವಸತಿ ಸೌಲಭ್ಯವನ್ನು ನೀಡಲಾಗುತ್ತಿದೆ.
ಇದರಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ಜೂನ್-30 ರೊಳಗೆ ವಾಸವಿ ಅಕಾಡೆಮಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9663900439, 080-22206151ಗೆ ಕರೆ ಮಾಡಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.












Leave a Reply