ಗುರುಮಠಕಲ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ಸ್ವಚ್ಛ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

Posted by

–

ಸುದ್ದಿ ಬೆಳಕು ವಾರ್ತೆ

ಗುರುಮಠಕಲ್ : ಭೂಮಿಯ ಮೇಲಿನ ಜೀವಸಂಕುಲದ ಉಳಿವಿಗಾಗಿ ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛ ಪರಿಸರ ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಹೇಳಿದರು.

ಪಟ್ಟಣದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪುರಸಭೆ ವತಿಯಿಂದ ಆಯೋಜಿಸಿದ್ದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯದಂತೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು. ಸ್ವಚ್ಛತೆ ಕೇವಲ ಪುರಸಭೆಯ ಜವಾಬ್ದಾರಿಯಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ ಎಂದರು.

ಸ್ವಚ್ಛ ಪರಿಸರದಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಹೀಗಾಗಿ ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರು ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪಾಪಣ್ಣ ಮನೆ, ಮಾಜಿ ಪುರಸಭೆ ಸದಸ್ಯ ಎಸ್.ಕೆ. ಮೈನೋದ್ದೀನ್, 

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಸೋಗಳಕರ್, ನೈರ್ಮಲ್ಯ ಅಧಿಕಾರಿ ರಾಮುಲುಗೌಡ, ಪುರಸಭೆ ಸಿಬ್ಬಂದಿ ಸೇರಿದಂತೆ ಇತರರು ಇದ್ದರೂ.

You Might Also Like

Leave a Reply

Your email address will not be published. Required fields are marked *

↑
Suddi Belaku