ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

Posted by

ಸುದ್ದಿ ಬೆಳಕು ವಾರ್ತೆ

ಶಹಾಪುರ: ದುಡಿಮೆ ಮತ್ತು ಜ್ಞಾನ ಎರಡೂ ಸಮಾನವಾಗಿದ್ದರೆ ಮಾತ್ರ ಸಮಾಜದ ಒಳಿತು ಸಾಧ್ಯ ಎಂಬ ಕನಕದಾಸರಆಶಯದಂತೆ ನಾವೆಲ್ಲರೂ ಬಾಳೋಣ ಎಂದು ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ತಬಿತಾ ಪ್ರಸಾದ ಹೇಳಿದರು. ಶಹಾಪುರದ ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತುಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಹಯೋಗದಲ್ಲಿ ನಡೆದ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಕನಕ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕದಾಸರ ವಿಚಾರಧಾರೆಗಳನ್ನು ಮತ್ತು ಜಾತ್ಯತೀತ ಮೌಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಸಾಮಾಜಿಕ ಬದಲಾವಣೆಯತ್ತ ಕಾರ್ಯ ಪ್ರವೃತ್ತರಾಗಬಹುದು ಎಂದು ಅಭಿಪ್ರಾಯ ಪಟ್ಟರು. ಕನ್ನಡ ವಿಭಾಗದ ಪ್ರಾಧ್ಯಾಪಕಿ ಸುರೇಖಾ ಪಾಟೀಲ್ ಉಪನ್ಯಾಸ ನೀಡಿ ಮಾತನಾಡಿದ ಅವರು ಕನ್ನಡ ನಾಡಿನ ಸಾಂಸ್ಕೃತಿ ಪರಂಪರೆಯಲ್ಲಿ ಅಚ್ಚಳಿಯದ ಛಾಪು ಮೂಡಿಸಿದವರು ಕನಕದಾಸರು. ನಡುಗನ್ನಡ ಸಾಹಿತ್ಯದ ಪ್ರಮುಖ ಕೀರ್ತನೆಕಾರ, ಸಾಮಂತ, ಕವಿ, ಜ್ಞಾನಿ, ದಾರ್ಶನಿಕರಾಗಿ ನೀಡಿದ ಕೊಡುಗೆ ಅಪಾರವಾಗುದೆ. “ಕುಲಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯೇನಾದರೂ ಬಲ್ಲಿರಾ?” ಎಂದು ವರ್ಗ ತಾರತಮ್ಯದ ವಿರುದ್ಧ ಸಾಹಿತ್ಯದ ಮೂಲಕ ಜಾಗೃತಿ ಮೂಡಿಸಿರುವುದಜ ಶ್ಲಾಘನೀಯ. ಕರ್ನಾಟಕದಲ್ಲಿ ಹರಿದಾಸ ಪರಂಪರೆಗೆ ಸುಮಾರು ೫೦೦ ವರ್ಷಗಳ ಭವ್ಯ ಇತಿಹಾಸವಿದೆ.

ಕನಕದಾಸರು ಮತ್ತು ಪುರಂಧರದಾಸರಥ ವೈಚಾರಿಕ ಸಂತರಿದಾಗಿ ಸಮಾಜದಲ್ಲಿ ಬೇರುಬಿಟ್ಟಿದ್ದ ಮೇಲು ಕೀಳು ಎಂಬ ಭಾವನೆ ಮತ್ತುಜಾತಿ-ಮತಗಳ ಸಿದ್ಧಾಂತ ಪಕ್ಕಕ್ಕೆ ಸರಿದವು.ದೈವಸ್ತುತಿಯೇ ಪ್ರಮುಖವೆನಿಸಿದ ಭಕ್ತಿ ಪರಂಪರೆಯ ಕಾಲದಲ್ಲಿ ಧೃವತಾರೆಯಂತೆ ಅವತರಿಸಿದ ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸಸಾಹಿತ್ಯಕ್ಕೆ, ತನ್ಮೂಲ ಕಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ. ಸಮಾಜ ಶಾಸ್ತ್ರದ ಪ್ರಾಧ್ಯಾಪಕ ಜಗದೀಶ ಬಿರೆದಾರ ಮಾತನಾಡಿ ಐದು ಶತಮಾನಗಳ ಹಿಂದೆನೇಒಬ್ಬ ಹರಿದಾಸ, ಆಧ್ಯಾತ್ಮಿಕ ಸಂತಕವಿ ಮಾನವನ ಬದುಕಿನಲ್ಲಿ ಏನೆಲ್ಲಾ ಎದುರಿಸಬೇಕಾಗುತ್ತದೆ ಎಂಬುದನ್ನು ಚಿತ್ರಿಸುತ್ತಲೇ ಜೀವನ ಮೌಲ್ಯಗಳನ್ನು ತಿಳಿ ಹೇಳಿದವರು.

ಕನಕ ಪುರಂದರರನ್ನು ಕನ್ನಡಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ ಎಂದು ನುಡಿದರು. ಜ್ಯೋತಿರ್ಗಮಯ ಸೇವಾ ಸಂಸ್ಥೆಯ ಅಧ್ಯಕ್ಷ ಮಹೇಶ್ ಪತ್ತಾರ ಮಾತನಾಡಿ ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ ಹೊತ್ತಿಗೆ, ಅದನ್ನು ಬಿಡಿಸಿ ಎಣಿಸಿ ಪೋಣಿಸಿದ ಪದಗಳನ್ನು ಅಥೈಸಿಕೊಂಡರಷ್ಟೇ ನಾವಾರೆಂದು ನಮಗರಿವಾಗುವುದುಎಂದು ಹೇಳಿದರು. ಕನಕದಾಸರು ಯಾವುದೋ ಒಂದು ಜಾತಿ ಇಲ್ಲವೇ ಜನಾಂಗದ ಅಭಿಮಾನಕ್ಕೆ, ಆದರಕ್ಕೆ ಮಾತ್ರವೇ ಕಟ್ಟುಬೀಳಬೇಕಾದ ಕವಿಗಳ ಸಾಲಿಗೆ ಸೇರಿದವರಲ್ಲ.

ಕನಕ ಕನ್ನಡ ಭಾಷಾಚಿಂತಕ, ಕನ್ನಡಿಗರ ಬದುಕುಗಳ ನಡುವಿನ ಬಿಕ್ಕಟ್ಟೊಳೊಳಗಿಂದ ಹುಟ್ಟಿದ, ನೊಂದ ಬದುಕುಗಳ ನಡುವಿನಿಂದ ಮೇಲೆದ್ದು ಬಂದ ಸಂತ. ಕನಕದಾಸರು ದಯಾ, ಮಥುರಾ, ಕಾಶಿ, ದ್ವಾರಕಾ, ಮೊದಲಾಗಿರಾಜಸ್ಥಾನ, ತಮಿಳುನಾಡು, ಆಂಧ್ರವನ್ನು ಸುತ್ತಿ ಬಂದವರು, ಯಾವುದೇ ಮತಕ್ಕೆಕಟ್ಟು ಬೀಳದೆ ಸರ್ವಮತಗಳ ಒಳಿತನ್ನು ಪಡೆದು ಸ್ವಂತ ವ್ಯಕ್ತಿತ್ತ್ವವನ್ನುಜನಹಿತಕ್ಕಾಗಿ ಬೆಳೆಸಿಕೊಂಡು ಬಾಳಿದವರು, ಉಳಿದವರೂ, ಬಾಳುವಂತೆ ಹೇಳಿದವರು.ದಬ್ಬಾಳಿಕೆಗೆ ಒಳಗಾದವರನ್ನು ಮೇಲೆತ್ತಲು ಪ್ರಯತ್ನಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ತಬಿತಾ ಪ್ರಸಾದ, ಕನ್ನಡ ವಿಭಾಗದ ಪ್ರದ್ಯಾಪಕಿ ಸುರೇಖಾ ಪಾಟೀಲ್, ಮಹೇಶ್, ಪತ್ತಾರ, ಜಗದೀಶ್ ಬಿರೆದಾರ ಮುಂತಾದವರಿದ್ದರು. ಶಿಕ್ಷಕ ಸಲೀಂ ಪಾಶ ನಿರೂಪಿಸಿದರು. ಸಂಗೀತಕಲಾವಿದೆ ವೈಷ್ಣವಿ ಮತ್ತು ಪಲ್ಲವಿ ಸಂಗಡಿಗರು ಕನಕ ದಾಸರ ಗೀತೆಗಳನ್ನು ಹಾಡಿದರು. ಯುವಕವಿ ಸಾಯಿಬಣ್ಣ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

Suddi Belaku