ಕಡೆಚೂರು : ಕರ್ನಾಟಕ ಚಾಲಕರ ಒಕ್ಕೂಟದ ಯಾದಗಿರಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಕಡೆಚೂರು ಗ್ರಾಮದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಗ್ರಾಮದ ಆಟೋ ನಿಲ್ದಾಣದಲ್ಲಿ ಆಟೋ ಘಟಕದ ಅಧ್ಯಕ್ಷ ರಾಜು ಮಡಿವಾಳ ಅವರ ನೇತೃತ್ವದಲ್ಲಿ ಹಾಗೂ ಉಪಾಧ್ಯಕ್ಷ ಖಾಸಿಂ ಅಲಿ ಮತ್ತು ಸದಸ್ಯರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕರ್ನಾಟಕ ಚಾಲಕರ ಒಕ್ಕೂಟದ ಸದಸ್ಯರು ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ವ್ಯಕ್ತಪಡಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.
Leave a Reply