ಸುದ್ದಿ ಬೆಳಕು ವಾರ್ತೆ
ಯಾದಗಿರಿ : 2026-27ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆದಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ.
ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಈ ನಿಬಂಧನೆಗೊಳಪಟ್ಟು ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಸಮುದಾಯದ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 3.50 ಲಕ್ಷ ರೂ.ಗಳ ಒಳಗಿರಬೇಕು. ಪ್ರವರ್ಗ-2ಎ, 3ಎ, 3ಬಿ ಅಭ್ಯರ್ಥಿಗಳಿಗೆ 2.50 ಲಕ್ಷ ರೂ.ಗಳ ಆದಾಯ ಮಿತಿ ನಿಗದಿಪಡಿಸಲಾಗಿದೆ.ಅಭ್ಯರ್ಥಿ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೊಂದಾಯಿಸಿರಬೇಕು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ಒಳಗಿರಬೇಕು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಒಳಗಿರಬೇಕು, ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿ ನಾಲ್ಕು ವರ್ಷ ಇರುತ್ತದೆ. ಪ್ರತಿ ಮಾಹೆ ಅಭ್ಯರ್ಥಿಗಳಿಗೆ 4000 ರೂ.ಗಳ ದಂತೆ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲಾ ಕಛೇರಿದಿಂದ ಪಡೆದ ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿಮಾಡಿ 2026ರ ಮೇ 30ರ ಒಳಗೆ ಅರ್ಜಿಸಲ್ಲಿಸಬೇಕು. ನಂತರ ಬಂದ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯ ದೂ.ಸಂ.08473253742ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Leave a Reply