
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ಜನಸಾಮಾನ್ಯರು ದೈನಂದಿನ ಜೀವನದಲ್ಲಿ ಕಾನೂನಿನ ಮೂಲಭೂತ ಅರಿವು ಹೊಂದಿರುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ತಿಳಿಸಿದರು.
ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಯಾದಗಿರಿ ವತಿಯಿಂದ ಮತ್ತು ಶಿಕ್ಷಣ ಇಲಾಖೆ ,ಗ್ರಾಮ ಪಂಚಾಯಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ,ಇವರುಗಳ ಸಹಯೋಗದೊಂದಿಗೆ, ಜನಸಾಮಾನ್ಯರಿಗಾಗಿ ನ್ಯಾಯ ಜಾಗೃತಿ ಮತ್ತು ಪಾರದರ್ಶಕ ಉಪಕ್ರಮ ಯೋಜನೆ ಕುರಿತು ಕಾನೂನು ಅರಿವು -ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಇರಬೇಕು ಹಾಗೂ ಮಕ್ಕಳಲ್ಲಿ ಬಾಲ್ಯದಿಂದಲೇ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸಬೇಕು ಎಂದರು.
ಗ್ರಾಮೀಣ ಭಾಗದ ಜನರಿಗೆ ಕಾನೂನು ಸೌಲಭ್ಯಗಳು ತಲುಪಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿನ ಪಾರದರ್ಶಕ ಉಪಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಜನಸಾಮಾನ್ಯರು ಅನಗತ್ಯ ಕಾನೂನು ಸಂಘರ್ಷಗಳಿಂದ ದೂರವಿರಲು ಮತ್ತು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯಕ ಕಾನೂನು ನೆರವು ಅಭೀರಕ್ಷಕರಾದ ಶಿವರಾಜ್ ಬಿ ಕಟ್ಟಿಮನಿ, ಹೊನಗೇರಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುದಕಪ್ಪ, ಅರೆಕಾಲಿಕ ಸ್ವಯಂ ಸೇವಕರಾದ ನಾಗಪ್ಪ ಗಮಗಾ ಇದ್ದರು.










Leave a Reply