ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಸಮಾಜದ ಅಭಿವೃದ್ಧಿ ಸಾಧ್ಯವಿರುವುದು ಕೇವಲ ಶಿಕ್ಷಣದಿಂದ ಮಾತ್ರ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಾದಿಗ ಸಮಾಜದವರು ಸ್ವಾಭಿಮಾನಿಗಳಾಗಿದ್ದು, ರಾಜಕೀಯವಾಗಿಯೂ ಮುಂದೆ ಬರುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಮೈತ್ರಿ ಅವರು ಕರೆ ನೀಡಿದರು.
​ನಗರದ ಹೊಸಳ್ಳಿ ಕ್ರಾಸ್ ಹತ್ತಿರವಿರುವ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಿತಿಯ ರಾಜ್ಯಾಧ್ಯಕ್ಷರಾದ ಪ್ರಭಾಕರ ಎಂ. ಹದನೂರ ಹಾಗೂ ಮಾಪಣ್ಣ ಹದನೂರ ಅವರ ಆದೇಶದ ಮೇರೆಗೆ, ಬಸವರಾಜು ಮೈತ್ರಿ ಅವರ ನೇತೃತ್ವದಲ್ಲಿ ಸಮಿತಿಯ ಜಿಲ್ಲಾ ಘಟಕ ಮತ್ತು ಯಾದಗಿರಿ ನಗರ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಮಾತನಾಡಿ, “ಸಮುದಾಯದ ಸರ್ವತೋಮುಖ ಏಳಿಗೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ. ಸಂಘಟನೆಯೇ ನಮ್ಮ ಬಹುದೊಡ್ಡ ಶಕ್ತಿಯಾಗಿದ್ದು, ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯಿಂದ ಕೆಲಸ ಮಾಡಿ ಶೋಷಿತ ವರ್ಗದ ಧ್ವನಿಯಾಗಬೇಕು” ಎಂದು ತಿಳಿಸಿದರು.

ಗೌರವಾಧ್ಯಕ್ಷರಾಗಿ ಮಲ್ಲಿಕಾರ್ಜುನ ಕನಡಿ ಹತ್ತಿಕುಣಿ, ಜಿಲ್ಲಾ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಕುರಕುಂದಾ, ಜಿಲ್ಲಾ ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಸಾವೂರ ದೋರನಹಳ್ಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಕೇಶ , ಜಿಲ್ಲಾ ಖಜoಚಿ ಸಾಯಬಣ್ಣ ಮತ್ತು ಯಾದಗಿರಿ ಜಿಲ್ಲಾ ನಗರ ಘಟಕ ಅಧ್ಯಕ್ಷರಾಗಿ ಅಶೋಕ್ ಧನಕಾಯಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ನೀಡಿಗಿ, ಹಲಿಗ್ಗಿವಾದಕರ ಜಿಲ್ಲಾ ಅಧ್ಯಕ್ಷರಾಗಿ ಹನುಮಂತ ಬಂಡಾರಿ ಹುಲಕಲ್, ಉಪಾಧ್ಯಕ್ಷರಾಗಿ ಮಲ್ಲಪ್ಪ ರಾಮ್ ಸಮುದ್ರ ಹಾಗೂ ಶರಣಪ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಿಪಣ್ಣ ಮ್ಯಾಗೇರಿ, ಮಲ್ಲಿಕಾರ್ಜುನ ಜೋಲ್ಲಪ್ಪನವರು , ಶಿವರಾಜ್ ದಾಸನಕೆರೆ , ಅನಿಲ್ ಕುಮಾರ ಕರಾಟೆ ಸೇರಿದಂತೆ ಇನ್ನೂ ಅನೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

Suddi Belaku