ಯಾದಗಿರಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಉದ್ಘಾಟನಾ ಕಾರ್ಯಕ್ರಮವನ್ನು ಲಕ್ಷ್ಮಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಉಪನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರುದ್ರಗೌಡ ಮಾಲಿಪಾಟೀಲ್ ಉಪಸ್ಥಿತರಿದ್ದರು. ನ್ಯಾಯವಾದಿ ಮಲ್ಲಿಕಾರ್ಜುನ ಅಂಗಡಿ ಹಾಗೂ ಜವಾಹರ್ ಪದವಿ ಪೂರ್ವ ಕಾಲೇಜಿನ ಶರಣಪ್ಪ ರಾಹುಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಉತ್ತಮ ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಮಾಜದ ಬಗ್ಗೆ ಜವಾಬ್ದಾರಿ ಹೊಂದುವುದರೊಂದಿಗೆ ಕಾನೂನನ್ನು ಸರಿಯಾದ ರೀತಿಯಲ್ಲಿ ಪಾಲಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಅತಿಥಿಗಳು ವಿದ್ಯಾರ್ಥಿಗಳಿಗೆ ತಿಳಿಸಿದರು.
ಉಪನಿರ್ದೇಶಕ ರುದ್ರಗೌಡ ಮಾಲಿಪಾಟೀಲ್ ಮಾತನಾಡಿ, ಸತತ ಅಭ್ಯಾಸವೇ ಗುರಿ ಮುಟ್ಟಲು ಸಹಕರಿಸುವ ಪ್ರಮುಖ ಸೂತ್ರವಾಗಿದೆ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ನಿರಂತರ ಪರಿಶ್ರಮ ಹಾಗೂ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕನ್ನಡ ಉಪನ್ಯಾಸಕ ರವೀಂದ್ರ ಅವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಣ್ಣಾರಾಯ ಉಗಾಡೆ ನೆರವೇರಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಸೋಮಶೇಖರ್ ಜಾಗಟೆ ವಂದನಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ನಿರ್ಮಲ ಸಿನ್ನೂರ್, ಶ್ಯಾಮವೇಲ ಕೆನಡಿ, ಸಿದ್ದರಾಮಪ್ಪ ಅನ್ವರ್, ಚಂದ್ರಶೇಖರ್ ವೈದ್ಯ, ಸಾಬಯ್ಯ ಕವಲದಾರ್ ಸೇರಿದಂತೆ ಕಾಲೇಜಿನ ಇತರ ಉಪನ್ಯಾಸಕರು, ಲಕ್ಷ್ಮಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Leave a Reply