
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಚುನಾಯಿತ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತದ ಚುನಾಯಿತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಬುಧವಾರಕ್ಕೆ 4,399 ದಿನಗಳನ್ನು ಪೂರೈಸಿದ್ದು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮೋದಿಯವರ ಪರಿವರ್ತನೀಯ ಆಡಳಿತ, ಜಾಗತಿಕ ಧ್ವನಿಯಾಗಿ ಅವರು ಕಾರ್ಯನಿರ್ವಹಿಸುತ್ತಿರುವ ರೀತಿ ಹಾಗೂ ಅಂತರ್ಗತ ಆರ್ಥಿಕ ಬೆಳವಣಿಗೆಯ ದೃಷ್ಟಿಕೋನವನ್ನು ಪ್ರತಿಯೊಬ್ಬರೂ ಮೆಚ್ಚುವಂತದ್ದಾಗಿದೆ ಎಂದು ಶ್ಲಾಘಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಬಡವರ ಕಲ್ಯಾಣ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಕ್ರಾಂತಿ, ಆರೋಗ್ಯ ಸೇವೆಗಳ ವಿಸ್ತರಣೆ, ಮಹಿಳಾ ಸಬಲೀಕರಣ ಹಾಗೂ ಮಧ್ಯಮ ವರ್ಗಕ್ಕೆ ತೆರಿಗೆ ಸಡಿಲಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಐತಿಹಾಸಿಕ ಸಾಧನೆ ಮಾಡುವ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿಯೂ ಭಾರತ ಆತ್ಮನಿರ್ಭರದತ್ತ ವೇಗವಾಗಿ ಸಾಗುತ್ತಿದೆ. ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರ ಭಾರತದ ಅಭಿಯಾನಗಳ ಮೂಲಕ ದೇಶಿಯ ಉತ್ಪಾದನೆಗೆ ಉತ್ತೇಜನ ನೀಡುತ್ತಿದ್ದಾರೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾಮಾನ್ಯ ಹಿನ್ನೆಲೆಯಿಂದ ಬಂದು ಕಳೆದ ಹನ್ನೇರಡು ವರ್ಷಗಳಲ್ಲಿ ದೇಶದ ಜನರ ಜೀವನಮಟ್ಟ ಸುಧಾರಿಸುವ, ಬಡವರನ್ನು ಸಬಲಗೊಳಿಸುವ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುವ ಹಲವಾರ ಕ್ರಮಗಳನ್ನು ಕೈಗೊಂಡಿದ್ದಾರೆ ವಿಕಸಿತ ಭಾರತ ಕನಸನ್ನು ನನಸಾಗಿಸಲು ಶ್ರಮಿಸುತ್ತಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದ ಮುಖಾಂತರ ಪ್ರತಿ ಮನೆಗಳಿಗೂ ತಲುಪಿಸಿ, ಭಾರತವನ್ನು ವಿಶ್ವಗುರು ಮಾಡುವುದರೊಂದಿಗೆ ಜಾಗತಿಕ ನಾಯಕರಾಗಿದ್ದು ನಮ್ಮ ಹೆಮ್ಮೆ, ಅವರ ಕಾರ್ಯಗಳು ಈ ದೇಶಕ್ಕೆ ಇನ್ನು ಅವಶ್ಯ. ದೇಶ ಸೇವೆಗಾಗಿ ಮೋದಿಯವರಿಗೆ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಹಾರೈಸಿದರು.












Leave a Reply