ಬಿಜೆಪಿ ಪಾದಯಾತ್ರೆಯಲ್ಲಿ ರಾಚಣ್ಣಗೌಡ ಮುದ್ನಾಳ್: 2028ರ ಗೆಲುವಿನ ವಿಶ್ವಾಸ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಎಸ್ ಟಿ ನಿಗಮದಲ್ಲಿನ ಹಗರಣದ ತನಿಖೆಗೆ ಒತ್ತಾಯಿಸಿ ಲಿಂಗಸೂಗುರಿನಿಂದ ಬಳ್ಳಾರಿಯವರೆಗೂ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಯಲ್ಲಿ ಯಾದಗಿರಿ ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಾದ ರಾಚಣ್ಣಗೌಡ ಮುದ್ನಾಳ ನೇತೃತ್ಚದ ತಂಡ ಭಾಗವಹಿಸುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಾಥ ನೀಡಿದರು.
ಈ ವೇಳೆ ಕಾರ್ಯಕರ್ತೆರು ರಾಜ್ಯಾಧ್ಯಕ್ಷ ವಿಜಯೇಂದ್ರ, ಮುಖಂಡ ರಾಚಣ್ಣಗೌಡ ಮುದ್ನಾಳ ಅವರಿಗೆ ಬೃಹತ್ ಗಾತ್ರದ ಹೂವಿನಹಾರ ಹಾಕಿ ಗೌರವಿಸಿದರು.
ಹತ್ತು ದಿನಗಳ ಈ ಪಾದಯಾತ್ರೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನಡುಕ ಹುಟ್ಟಿಸಿದೆ ಎಂದು ಮುದ್ನಾಳ ಹೇಳಿದರು.


ಪಾದಯಾತ್ರೆಗೆ ಜನರು ಅಭೂತಪೂರ್ವ ಬೆಂಬಲ ನೀಡಿದ್ದು ನೋಡಿದರೆ 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ರಾಚಣ್ಣಗೌಡ ಮುದ್ನಾಳ ಹೇಳಿದರು.
ಮಾಜಿ ಸಚಿವರಾದ ಶ್ರೀರಾಮುಲು, ರಾಜೂಗೌಡ, ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಮಾಜಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ, ಗುರು ಕಾಮಾ, ಅಡಿವೆಪ್ಪಾ ಜಾಕಾ ಸೇರಿದಂತೆಯೇ ಇತರರಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku