ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ

Posted by


ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ

ಸುದ್ದಿ ಬೆಳಕು ವಾರ್ತೆ

ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು.

ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ಈ ವೇಳೆ ಶಾಲೆ ಮತ್ತು ಕಾಲೇಜುಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಆರ್ಯ ವೈಶ್ಯ ಸಮಾಜದ ವಿದ್ಯಾರ್ಥಿಗಳನ್ನು ಶಾಲು, ಹಾರ ಹಾಕಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಪೋಷಕರು ಮತ್ತು ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಈಶ್ವರಯ್ಯ ಬಾದಾಮಿ, ಸೈಲಾಜಾ ವೈ, ಮೇಘನಾ ಕೆ, ಸುಧಾ ವಿನೋದ, ಪ್ರೀಯಾಂಕ ವೆಂಕಟೇಶ, ಸೇರಿದಂತೆ ಆರ್ಯವೈಶ್ಯ ಸಮಾಜದ ಹಿರಿಯರು, ಯುವಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku