ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಮುಂಗಾರು ಆರಂಭವಾಗುವ ಮೊದಲೇ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುಂಚಿತವಾಗಿಯೇ ಕಾರ್ಯೋನ್ಮುಖವಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದರು.
ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರು ತಾಲ್ಲೂಕುಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇ ಸಂಘಟನೆಯ ಜೊತೆಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ಮುಂಗಾರು ಆರಂಭವಾಗುವ ಮೊದಲೇ ಅಗತ್ಯ ಬೀಜ, ರಸಗೊಬ್ಬರ ಸೇರಿದಂತೆ ಇನ್ನಿತರ ರೈತರ ಬೇಡಿಕೆಗೆ ಅನುಗುಣವಾಗಿ ಕೃಷಿ ಸಾವiಗ್ರಿಗಳ ದಾಸ್ತಾನು ಇಟ್ಟುಕೊಂಡು ಸನ್ನದ್ದರಾಗಿರಲು ಅಗತ್ಯ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ರೈತರ ಅನುಕೂಲಕ್ಕೆ ಪ್ರಥಮಾದ್ಯತೆ ಮೇರೆಗೆ ಕೆಲಸ ಮಾಡಬೇಕು ಪ್ರತಿವರ್ಷ ಮುಂಗಾರು ಆರಂಭವಾಗಿ ಬಿತ್ತನೆ ವೇಳೆ ಬೀಜ, ರಸಗೊಬ್ಬರ ಕೊರತೆಯಾಗಿ ರೈತರು ಪರದಾಡುವಂತಾಗುತ್ತಿರುವುದು ಸರ್ವೇ ಸಾಮಾನ್ಯವಾಗಿ ಇದುವರೆಗೆ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಮುಂಚಿತವಾಗಿ ಎಚ್ಚೆತ್ತುಕೊಂಡು ಕೃಷಿ ಪರಿಕರಗಳ ಮುಂಗಡವಾಗಿ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಕೃಷಿ ಇಲಾಖೆಗೆ ತಾಕೀತು ಮಾಡಬೇಕು ಎಂದು ಆಗ್ರಹಿಸಿದರು.

ಇದಲ್ಲದೇ ಭೂ ಮಾಪನ ಇಲಾಖೆಯ ವಿರುದ್ಧ ಭೂ ಮಾಪಕರು ನಡೆಸುತ್ತಿರುವ ಅನಿರ್ದಿಷ್ಟ ಕರ್ತವ್ಯಕ್ಕೆ ಹಾಜರಾಗದಿರುವ ಹೋರಾಟ ಮುಂದುವರೆದ ಪರಿಣಾಮ ರೈತರಿಗೆ ಸಮಸ್ಯೆಯಾಗಿದೆ. ಬೇಸಿಗೆ ಸಂದರ್ಭದಲ್ಲಿ ಪೋಡಿ, ಸರ್ವೇ ಮುಂತಾದ ಕಾರ್ಯಗಳು ನಡೆಯುತ್ತಿದ್ದವು ಆದರೆ ಕಳೆದ ತಿಂಗಳುಗಳಿAದ ಭೂ ಮಾಪಕರು ಅನಿರ್ದಿಷ್ಟ ಮುಷ್ಕರದಲ್ಲಿರುವುದರಿಂದ ಇನ್ನಿಲ್ಲದ ಸಮಸ್ಯೆಗಳು ಎದುರಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಸರ್ಕಾರ ತಕ್ಷಣ ಎಚ್ಚೆತ್ತು ಭೂ ಮಾಪಕರ ಬೇಡಿಕೆ ಈಡೇರಿಸಿ ತಕ್ಷಣ ಅವರು ಕರ್ತವ್ಯಕ್ಕೆ ಹಾಜರಾಗುವಂತೆ ಕ್ರಮ ವಹಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸುವುದಾಗಿ ಹೇಳಿದರು.
ರೈತರ ಸಮಸ್ಯೆಗಳನ್ನು ಇತ್ಯರ್ಥಪಡಿಸದೇ ಇದ್ದಲ್ಲಿ ಕರವೇ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ವಿರುದ್ಧ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲೆಯಾದ್ಯಂತ ಕರವೇ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು. ಮತ್ತು ಶಸ್ತçಚಿಕಿತ್ಸೆಗೆ ಒಳಗಾಗಿ ಗುಣಮುಖರಾಗಿ ಸಭೆಗೆ ಹಾಜರಾದ ಸಿದ್ದು ನಾಯಕ ಹತ್ತಿಕುಣಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರೆಯಲಿದ್ದಾರೆ ಮತ್ತೆ ಎಂದಿನAತೆ ಸಕ್ರಿಯವಾಗಿ ಕನ್ನಡಮ್ಮನ ಸೇವೆಗೆ ತೊಡಗಿಸಿಕೊಳ್ಳಲಿದ್ದಾರೆ ಎಂದು ಅವರು ಪ್ರಕಟಿಸಿದರು.

ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ಸಂತೋಷ ನಿರ್ಮಲಕರ್, ನಿಂಗಪ್ಪ ಗುಡಗುಡಿ, ಚೌಡಯ್ಯ ಬಾವೂರ, ವೆಂಕಟೇಶ ಬೈರಿಮಡ್ಡಿ, ಅಬ್ದುಲ್ ಚಿಗಾನೂರ, ಶರಣಬಸಪ್ಪ ಯಲ್ಹೇರಿ, ಬಸವರಾಜ ಚೆನ್ನೂರ, ಶರಣಪ್ಪ ದಳಪತಿ, ಸಿದ್ದಲಿಂಗರಡ್ಡಿ ಮುನಗಾಲ, ಅಂಬ್ರೇಷ್ ಕಟ್ಟಿಮನಿ, ಸಿದ್ದಪ್ಪ ಕೂಲೂರ, ಸಿದ್ದಪ್ಪ ಕ್ಯಾಸಪನಳ್ಳಿ, ಭೀಮರಾಯ ರಾಮಸಮುದ್ರ, ವೆಂಕಟರಾಮುಲು ಸೈದಾಪೂರ, ಅಶೋಕ ನಾಯಕ, ಹಣಮಂತ ತೇಕರಾಳ, ಮಲ್ಲಿಕಾರ್ಜುನ ದೋರನಳ್ಳಿ, ರಮೇಶ ಡಿ. ನಾಯಕ ಸೇರಿ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *

Suddi Belaku