ಯಾದಗಿರಿ : ಸಾಮಾಜಿಕ ಕ್ಷೇತ್ರದಲ್ಲಿನ ಗಣನೀಯ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಯಾದಗಿರಿ ನಗರದ ವಕೀಲರಾದ ನಾಗರಾಜ ಬೀರನೂರ ಅವರಿಗೆ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ಏಪ್ರಿಲ್ 15ರಂದು ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ…