by
Tag: DK Shivakumar

ಬೆಂಗಳೂರಿನ ಅಭಿವೃದ್ಧಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಡಿಕೆಶಿ ಮಹತ್ವದ ಚರ್ಚೆ
ಸುದ್ದಿ ಬೆಳಕು ವಾರ್ತೆ ನವದೆಹಲಿ: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ಬೆಂಗಳೂರಿನ ಅಭಿವೃದ್ಧಿ ಹಾಗೂ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯನ್ನು ಬೆಂಗಳೂರಿನ ಸಾರ್ವಜನಿಕ ಬಳಕೆಗೆ ತರಲು ಹಾಗೂ ನಗರದ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರ ಮುಂದಿಟ್ಟರು. ಚರ್ಚೆಯಾದ…

ವೀರಶೈವ ಲಿಂಗಾಯತ ಧರ್ಮದ ತತ್ವಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಸಕಲರ ಹಿತವನ್ನು ಸದಾ ಬಯಸಿ ಅಮೂಲ್ಯ ವಿಚಾರಧಾರೆಗಳನ್ನು ನೀಡಿದ ಶ್ರೇಯಸ್ಸು ವೀರಶೈವ ಧರ್ಮಕ್ಕಿದೆ. ಮಾನವ ಧರ್ಮದ ಉತ್ಕೃಷ್ಟ ವಿಚಾರಗಳನ್ನು ವೀರಶೈವ ಧರ್ಮ ಪ್ರತಿಪಾದಿಸುತ್ತಿದ್ದು, ಸಾಮಾಜಿಕ ಬದುಕಿಗೆ ವೀರಶೈವ ಧರ್ಮದ ಪಂಚಪೀಠಗಳು ನೀಡಿರುವ ಸಂಸ್ಕಾರ ಮತ್ತು ಸಂಸ್ಕೃತಿಯ ಕೊಡುಗೆ ಅಪಾರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ನಗರದ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವೀರಶೈವ ಲಿಂಗಾಯತ ಧರ್ಮ…
by

ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ: ಸಿಎಂ ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಜನಸಾಮಾನ್ಯರು ಸರ್ಕಾರಿ ಕಚೇರಿಗಳು ಅಥವಾ ನ್ಯಾಯಾಲಯದ ಕದ ಕಟ್ಟಿದಾಗ ದೇವರನ್ನೇ ಕೇಳುತ್ತಿದ್ದೇವೆ ಎಂಬ ಮನೋಭಾವವಿರುತ್ತದೆ. ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಭಾನುವಾರ ನಡೆದ ‘ದಕ್ಷಿಣ ವಲಯದ ಕಾನ್ಸುಲೇಷನ್ ಆಫ್ ಸ್ಟಾಕ್ ಸಾಕ್ಷಿಗಳ ಸುಧಾರಣಾ ಸಮಿತಿ 2026’ರ ಸಮಾರೋಪ ಕಾರ್ಯಕ್ರಮವನ್ನು ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಸ್ಟಾಕ್ ವಿಟ್ನೆಸ್ ರಿಫಾರ್ಮ್ಸ್ಫ್ ಕಮಿಟಿ ಅಗತ್ಯತೆಯ ಬಗ್ಗೆ…
by

ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸದಾಶಿವನಗರ ನಿವಾಸದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ…
by

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ
ಯಾದಗಿರಿ: ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾರೊಬ್ಬರೂ ವಂಚಿತರಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಅವರು ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ…
by














