by
Tag: Drought Relief

ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಹಾಗೂ ವಡಗೇರಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರನ್ನು ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಶಾಸಕರ ಕಾರ್ಯಾಲಯದಲ್ಲಿ ಸನ್ಮಾನಿಸಿದರು. ಬರಪೀಡಿತ ತಾಲೂಕುಗಳ ಘೋಷಣೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ವಿವಿಧ ಬರ ಪರಿಹಾರ ಕ್ರಮಗಳು ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.…

ಯಾದಗಿರಿ ಬರ ಪಟ್ಟಿಯಲ್ಲಿ ತಾರತಮ್ಯ ಆರೋಪ: ಸರ್ಕಾರದ ವಿರುದ್ಧ ಮಾಗನೂರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ, ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಕೇವಲ ಒಂದು ತಾಲೂಕನ್ನು ಮಾತ್ರ ಸೇರಿಸಿರುವುದು ಅನ್ಯಾಯ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಮಳೆ ಅಭಾವದಿಂದ ಬೆಳೆಗಳು ಹಾನಿಗೊಳಗಾಗಿವೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿದ್ದು, ಸಾಲ ಮಾಡಿ ಕೃಷಿ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರದ ಬರ ಪಟ್ಟಿಯಲ್ಲಿ ಜಿಲ್ಲೆಗೆ…
by

ಯಾದಗಿರಿ ಬರ ಪಟ್ಟಿಗೆ ಉಳಿದ ತಾಲೂಕುಗಳ ಸೇರ್ಪಡೆ: ಶಾಸಕ ತುನ್ನೂರ ಭರವಸೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರದ ಬರ ಘೋಷಣೆಯ ನಿರ್ಧಾರದ ಬಗ್ಗೆ ರೈತರು ಯಾವದೇ ಆತಂಕ್ಕಕ್ಕೆ ಒಳಗಾಗಬಾರದು. ಮುಂದಿನ ೮-೧೦ ದಿನದಲ್ಲಿ ಬಿಟ್ಟು ಹೋಗಿರುವ ಇನ್ನುಳಿದ ತಾಲ್ಲೂಕಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡುವ ಭರವಸೆಯನ್ನು ಕಂದಾಯ ಸಚಿವರಾದ ಜಿ.ಪರಮೇಶ್ವರ ಅವರು ನೀಡಿದ್ದು, ಹಿಂದಿನ ಪಟ್ಟಿಯಲ್ಲಿ ಕೈಬಿಟ್ಟ ತಾಲೂಕುಗಳು ಬರ ಪೀಡಿತ ಎಂದು ಘೋಷಣೆಯಾಗಲಿವೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಶಾಸಕರು, ಸೆ.೪ ಶುಕ್ರವಾರ ಕಂದಾಯ ಸಚಿವ…
by

ಬರ ಪಟ್ಟಿಯಲ್ಲಿ ಯಾದಗಿರಿ ತಾಲೂಕುಗಳಿಗೆ ಮತ್ತೆ ನಿರಾಸೆ: ಸಾಹುಕಾರ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ಯಾದಗಿರಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯಲ್ಲಿ ಶಹಾಪುರ ತಾಲೂಕು ಮಾತ್ರ ಘೋಷಣೆಯಾಗಿದ್ದು, ಯಾದಗಿರಿ, ವಡಗೇರಾ, ಗುರುಮಿಠಕಲ್, ಸುರಪುರ ಹಾಗೂ ಹುಣಸಗಿ ತಾಲೂಕುಗಳಿಗೆ ಸ್ಥಾನ ನೀಡದಿರುವುದು ಖಂಡನೀಯ. ಇದೀಗ ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲೂ ಈ ತಾಲೂಕುಗಳನ್ನು ಕಡೆಗಣಿಸಿರುವುದು ಸರ್ಕಾರದ ರೈತಪರ ಕಾಳಜಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಯುವಮೋರ್ಚಾ ಯಾದಗಿರಿ ಜಿಲ್ಲಾಧ್ಯಕ್ಷ ಶ್ರೀಧರ…
by

ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…
by

ಯಾದಗಿರಿ ಬಂದ್‌ಗೆ ಜಯ ಕರ್ನಾಟಕ ಸಂಘಟನೆ ಬೆಂಬಲ ಇಲ್ಲ : ಬಿಎನ್‌ವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ವ ಸಂಘಟನೆಗಳ ಹೋರಾಟ ಸಮಿತಿ ಹೆಸರಿನಲ್ಲಿ ಸೆ.7 ರಂದು ನಡೆಸಲು ಉದ್ದೇಶಿತ ಬಂದ್ ಗೆ ನಮ್ಮ ಬೆಂಬಲ ಇಲ್ಲ ಮತ್ತು ನಮ್ಮ ಸಂಘಟನೆಯು ಇದರಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಯ ಕರ್ನಾಟಕ ಸಂಘಟನೆ ಈಗಾಗಲೇ ರೈತರ ಪರವಾಗಿ ನಿರಂತರ ಹೋರಾಟ ಮಾಡುತ್ತಾ ಬರುತ್ತಿದೆ. ಮತ್ತು ರೈತರಿಗೆ ಎಕರೆಗೆ 50ಸಾವಿರ ಬರ ಪರಿಹಾರ…
by

ಯಾದಗಿರಿ ಜಿಲ್ಲೆಯ ಬರ ಪರಿಸ್ಥಿತಿ ಸಚಿವರ ಕಣ್ಣಿಗೆ ಕಾಣಲಿಲ್ಲವೇ? ಮಾನದಂಡವೇನು?: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿ ಹೋದರೂ, ವಾಸ್ತವ ಪರಿಸ್ಥಿತಿ ಅವರ ಕಣ್ಣಿಗೆ ಕಾಣಲಿಲ್ಲವೇ? ಅವರು ಸರ್ಕಾರಕ್ಕೆ ಯಾವ ವರದಿ ನೀಡಿದ್ದಾರೆ ಮತ್ತು ಯಾವ ಮಾನದಂಡದ ಆಧಾರದ ಮೇಲೆ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಕರ್ನಾಟಕ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ರಾಚನಗೌಡ ಮುದ್ನಾಳ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…
by

ಯಾದಗಿರಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ: ಮಹೇಶರೆಡ್ಡಿ ಮುದ್ನಾಳ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆ ಇಲ್ಲದೇ ಬಿತ್ತಿದ ಬೆಳೆಗಳು ನಾಶವಾಗಿ ರೈತರು ಭಾರಿ ಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಯಾದಗಿರಿ ತಾಲೂಕವನ್ನು ಬರಗಾಲ ಘೋಷಣೆ ಮಾಡದ ಸರ್ಕಾರದ ಕ್ರಮವನ್ನು ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಮಹೇಶ ರೆಡ್ಡಿ ಮುದ್ದಾಳ ಖಂಡಿಸಿದ್ದಾರೆ. ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಚಟ್ಟಳ್ಳಿ ಗ್ರಾಮದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಡಿ ತಾಲೂಕಿನಲ್ಲಿ ಲಕ್ಷಾಂತರ ಎಕರೆ ಭೂಮಿಯಲ್ಲಿ ಹೆಸರು, ಉದ್ದು, ಹತ್ತಿ, ತೊಗರಿ ಸೇರಿದಂತೆಯೇ ಇತರೇ ಬೆಳೆಗಳು ಮಳೆಯಿಲ್ಲದೇ ಒಣಗಿವೆ. ಸಾವಿರಾರು…
by

ಯಾದಗಿರಿಯ 4 ಕ್ಷೇತ್ರಗಳನ್ನೂ ಬರಪೀಡಿತ ಎಂದು ಘೋಷಿಸಿ: ಭೀಮುನಾಯಕ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಶಹಾಪುರ ಕ್ಷೇತ್ರ ವೊಂದನ್ನೇ ಬರ ಪೀಡಿತ ಎಂದು ಘೋಷಣೆ ಮಾಡಿದ ಸರ್ಕಾರ ಯಾದಗಿರಿ ಜಿಲ್ಲೆಯ ಇನ್ನುಳಿದ ಮೂರು ಕ್ಷೇತ್ರಗಳ ವ್ಯಾಪ್ತಿಯ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ, ಕೂಡಲೇ ಆಗಿರುವ ಅನ್ಯಾಯ ಸರಿಪಡಿಸಬೇಕು ಇಲ್ಲವಾದಲ್ಲಿ ಜಿಲ್ಲೆಗೆ ಭೇಟಿ ಕೊಡುವ ಸಚಿವರು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ ಎಂದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ ಎನ್ ಭೀಮುನಾಯಕ ಗುಡುಗಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ನೆರೆಯ…
by
- ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ

- ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

- ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

- ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

- ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
















