by
Tag: Farmers Protest

ರೈತರ ಕೃಷಿ ಪಂಪಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಮೌನ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಉದ್ಭವಿಸಿದೆ, ಯಾದಗಿರಿ ಹಾಗೂ ಗುರುಮಿಠಕಲ್ ತಾಲ್ಲೂಕಿನಲ್ಲಿ ಸಣ್ಣ-ಪುಟ್ಟ ರೈತರು ತಮ್ಮ ಜಮೀನುಗಳಲ್ಲಿ ಬೊರವೆಲ್ ಕೊರೆಸಿ, ವಿದ್ಯುತ್ ಸಂಪರ್ಕ ಪಡೆದು ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ, ಆದರೆ ಕಳೆದ ೧೫ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ರೈತರ ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಹಾಗೂ…

ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…
by

ಯಾದಗಿರಿ ಬಂದ್‌ಗೆ ಜಯ ಕರ್ನಾಟಕ ಸಂಘಟನೆ ಬೆಂಬಲ ಇಲ್ಲ : ಬಿಎನ್‌ವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ವ ಸಂಘಟನೆಗಳ ಹೋರಾಟ ಸಮಿತಿ ಹೆಸರಿನಲ್ಲಿ ಸೆ.7 ರಂದು ನಡೆಸಲು ಉದ್ದೇಶಿತ ಬಂದ್ ಗೆ ನಮ್ಮ ಬೆಂಬಲ ಇಲ್ಲ ಮತ್ತು ನಮ್ಮ ಸಂಘಟನೆಯು ಇದರಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಯ ಕರ್ನಾಟಕ ಸಂಘಟನೆ ಈಗಾಗಲೇ ರೈತರ ಪರವಾಗಿ ನಿರಂತರ ಹೋರಾಟ ಮಾಡುತ್ತಾ ಬರುತ್ತಿದೆ. ಮತ್ತು ರೈತರಿಗೆ ಎಕರೆಗೆ 50ಸಾವಿರ ಬರ ಪರಿಹಾರ…
by

ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಐಪಿ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂಬ ಆರೋಪದ ನಡುವೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ವಿದ್ಯುತ್ ಲೈನ್ ಕತ್ತರಿಸಿರುವ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಾಚವಾರ, ನಿಂಗಸದಲ್ಳಿ, ಹಣಮಾನಾಯಕ ತಾಂಡಾ ಸೇರಿದಂತೆ ಹಲವು ಗ್ರಾಮಗಳ ರೈತರು ಜೇಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯರಗೋಳ ಗ್ರಾಮದ 110 ಕೆವಿ ವಿದ್ಯುತ್ ಕೇಂದ್ರದಿಂದ ಬಾಚವಾರ, ನಿಂಗಸದಲ್ಳಿ ಹಾಗೂ ಹಣಮಾನಾಯಕ ತಾಂಡಾ ಭಾಗದ ಐಪಿ ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿತ್ತು.…
by

ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಶೇ. 25 ಕ್ಕೂ ಕಮ್ಮಿ ಮಳೆಯಾದ ಹಿನ್ನೆಲೆಯಲ್ಲಿ ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಬರಪರಿಹಾರ ಕಾಮಗಾರಿ ಆರಂಭಿಸಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯೇ ಬಾರದ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಒಣಗಿದ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ. ಮಳೆ ಬಾರದೇ ಇದ್ದುದರಿಂದ ರೈತರು…
by

ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ತತ್ತರಿಸಿರುವ ಯಾದಗಿರಿ ಜಿಲ್ಲೆಯನ್ನು ತಕ್ಷಣವೇ ‘ತೀವ್ರ ಬರಪೀಡಿತ’ ಎಂದು ಘೋಷಿಸಬೇಕು ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಜುಲೈ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ವಿವರಿಸಿದೆ. ಬತ್ತಿದ…
by

ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…
by

ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ














