Tag: Gurmitkal

  • ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

    ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ…

  • ಗುರುಮಠಕಲ್‌ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ

    ಗುರುಮಠಕಲ್‌ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪಟ್ಟಣದ ನಗರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪೋಲೇಲ ಯಲ್ಲಮ್ಮ ದೇವಿಯ 6ನೇ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ನೆರವೇರಿತು. ಆಷಾಢ ಮಾಸದ ನಾಗರ ಅಮಾವಾಸ್ಯೆ ಪ್ರಯುಕ್ತ ನಡೆದ ಉತ್ಸವದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ನೈವೇದ್ಯ ಸಮರ್ಪಿಸಿದರು. ಉತ್ಸವದ ಅಂಗವಾಗಿ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಿಯ ದರ್ಶನಕ್ಕಾಗಿ ಭಕ್ತರು ಸರದಿಯಲ್ಲಿ ನಿಂತು ಪೂಜೆ…

  • ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು

    ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ (ಯಾದಗಿರಿ): ಇಲ್ಲಿನ ವಿದ್ಯಾಜ್ಯೋತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಮಕ್ಕಳ ಹಕ್ಕುಗಳು ಮತ್ತು ಸಂಬಂಧಿತ ಕಾಯ್ದೆ-ಕಾನೂನುಗಳ ಕುರಿತು ಜಾಗೃತಿ ಹಾಗೂ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಕುಮಾರಿ ಮಂಜಮ್ಮ, “ಬಾಲಕಾರ್ಮಿಕ ನಿಷೇಧ ಕಾಯ್ದೆ-೧೯೮೬ ರ ಪ್ರಕಾರ ೬ ರಿಂದ ೧೮ ವರ್ಷದೊಳಗಿನ ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಮಕ್ಕಳು ಶಾಲೆಯನ್ನು ಬಿಟ್ಟು ಕೂಲಿ ಕೆಲಸಕ್ಕೆ…

  • ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿಯಿಂದ ಗುರುಮಠಕಲ್ ಕಡೆಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ (62) ಎಂದು ಗುರುತಿಸಲಾಗಿದ್ದು, ಅವರು ಯಾದಗಿರಿ ತಾಲೂಕಿನ ಯದ್ಲಾಪುರ ತಾಂಡಾ ನಿವಾಸಿಯಾಗಿದ್ದಾರೆ. ಯಾದಗಿರಿ–ಗುರುಮಠಕಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಆಶನಾಳ ಸಮೀಪ ತಲುಪಿದ ವೇಳೆ ರಾಮಚಂದ್ರ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಬಸ್‌ನಲ್ಲಿಯೇ ಮೃತಪಟ್ಟಿದ್ದಾರೆ…

  • ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…

Suddi Belaku