by
Tag: Kannada Rajyotsava

ಕಾಡಂಗೇರಾ (ಬಿ) ಗ್ರಾಮದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿ ಕನ್ನಡ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ೭೧ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಈ ವೇಳೆ ಮಾತನಾಡಿದ ವೇದಿಕೆಯ ಗ್ರಾಮ ಘಟಕದ ಅಧ್ಯಕ್ಷ ಶಿವಶರಣ ನಾಯ್ಕೋಡಿ, ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಹೊಣೆಗಾರಿಕೆ. ಕನ್ನಡ ಭಾಷೆಯ ಉಳಿವು ಕೇವಲ ಮಾತಿಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ಯುವಜನರು ಕನ್ನಡದ ಇತಿಹಾಸ, ಪರಂಪರೆ ಮತ್ತು ಹಿರಿಮೆಯನ್ನು…

ಕುಲಕುಂದಿಯಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
ಸುದ್ದಿ ಬೆಳಕು ವಾರ್ತೆ ಚಿತ್ತಾಪುರ : ತಾಲೂಕಿನ ನಾಲವಾರ ವಲಯ ಹೋಬಳಿ ವ್ಯಾಪ್ತಿಯ ಕುಲಕುಂದಿ ಗ್ರಾಮದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಂಜುನಾಥ ಎಸ್. ನಾಯ್ಕಲ್ ಮಾತನಾಡಿ, ನಾಡು, ನುಡಿ, ಭಾಷೆ ಹಾಗೂ ಜಲವನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕನ್ನಡ ಭಾಷೆಯ ಉಳಿವು…
by

ಅಭಿಮಾನದಿಂದ ಕನ್ನಡ ಭಾಷೆ ಕಲಿಯಿರಿ: ವೆಂಕಟೇಶ ಪೂಜಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಡಿ. ದೇವರಾಜ ಅರಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ (ಕನ್ನಡ ಮಾಧ್ಯಮ)ದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಂತೋಷದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ವಿದ್ಯಾರ್ಥಿಗಳಾದ ಪರಶುರಾಮ ಮತ್ತು ಪ್ರದೀಪ್ ಮಾತನಾಡಿದರು. ನಂತರ ಶಾಲೆಯ ಮುಖ್ಯಶಿಕ್ಷಕ ವೆಂಕಟೇಶ ಪೂಜಾರಿ ಅವರು ಕನ್ನಡ ಭಾಷೆ, ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಸ್ಥಾನಮಾನದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಅಭಿಮಾನದಿಂದ…
by

ಮದ್ದರಕಿಯಲ್ಲಿ ಕೂಲಿಕಾರ್ಮಿಕರ ನಡುವೆ ಕನ್ನಡ ರಾಜ್ಯೋತ್ಸವ: ಶಾಸಕ ದರ್ಶನಾಪೂರ
ಸುದ್ದಿ ಬೆಳಕು ವಾರ್ತೆ ಶಹಾಪುರ : ಬರಗಾಲದ ಕಠಿಣ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಶ್ರಮಿಕರು ಹಾಗೂ ಕೂಲಿಕಾರ್ಮಿಕರಿಗೆ ಆಸರೆಯಾಗುವ ನಿಟ್ಟಿನಲ್ಲಿ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕು ಪಂಚಾಯಿತಿ ಶಹಾಪುರ ಹಾಗೂ ಗ್ರಾಮ ಪಂಚಾಯಿತಿ ಮದ್ದರಕಿ ಸಹಯೋಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿರುವ ಗೋಕಟ್ಟೆ ನಿರ್ಮಾಣ ಕಾಮಗಾರಿ ಸ್ಥಳದಲ್ಲೇ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಬರದಿಂದ ಬಸವಳಿದ ಶ್ರಮಿಕರ ಬದುಕಿಗೆ ಭರವಸೆ ಮೂಡಿಸುವ ಆಶಯದೊಂದಿಗೆ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ…
by

ಸುರಪುರದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಸುದ್ದಿ ಬೆಳಕು ವಾರ್ತೆ ಸುರಪುರ : ಕನ್ನಡ ನಮ್ಮ ಉಸಿರು, ಕನ್ನಡಿಗರ ಸ್ವಾಭಿಮಾನ ನಮ್ಮ ಶಕ್ತಿ. ನಾಡು, ನುಡಿ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಉಳಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಸಂಘಟನೆ ಕನ್ನಡಿಗರ ಹಕ್ಕುಗಳ ರಕ್ಷಣೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ. ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿಯೂ ನಮ್ಮದಾಗಬೇಕು. ಪರಿಸರ ಸಂರಕ್ಷಣೆ ಮತ್ತು ಸಮಾಜಸೇವೆ ಸಂಘಟನೆಯ ಪ್ರಮುಖ ಧ್ಯೇಯಗಳಾಗಿವೆ ಎಂದು ಜಿಲ್ಲಾ ಕಾರ್ಯಾಧ್ಯಕ್ಷ ರವಿಕುಮಾರ ನಾಯಕ ಬೈರಿಮರಡಿ ಹೇಳಿದರು. ನಗರದ…
by

ಕಡೆಚೂರಿನಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ
ಸುದ್ದಿ ಬೆಳಕು ವಾರ್ತೆ ಕಡೆಚೂರು : ಕರ್ನಾಟಕ ಚಾಲಕರ ಒಕ್ಕೂಟದ ಯಾದಗಿರಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಕಡೆಚೂರು ಗ್ರಾಮದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಗ್ರಾಮದ ಆಟೋ ನಿಲ್ದಾಣದಲ್ಲಿ ಆಟೋ ಘಟಕದ ಅಧ್ಯಕ್ಷ ರಾಜು ಮಡಿವಾಳ ಅವರ ನೇತೃತ್ವದಲ್ಲಿ ಹಾಗೂ ಉಪಾಧ್ಯಕ್ಷ ಖಾಸಿಂ ಅಲಿ ಮತ್ತು ಸದಸ್ಯರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ…
by

ಯಾದಗಿರಿಯಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಚಾಲಕರ ಒಕ್ಕೂಟದ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಟ್ಯಾಕ್ಸಿ ನಿಲ್ದಾಣದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಬಸುಗೌಡ ಎಂ. ಚಟ್ನಳ್ಳಿ ಅವರ ನೇತೃತ್ವದಲ್ಲಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದೇವರಮನೆ,…
by

ನವೆಂಬರ್ 1ಕ್ಕೆ ಮಾತ್ರ ಕನ್ನಡಾಭಿಮಾನ ಸೀಮಿತವಾಗದಿರಲಿ: ಪಿಡಿಓ ನಾಗರತ್ನ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ನಾವು ಕೇವಲ ನವೆಂಬರ್ 1ರಂದು ಮಾತ್ರ ಕನ್ನಡ ಭಾಷೆಯ ಬಗ್ಗೆ ಭಾಷಣ ಮಾಡುವುದಲ್ಲ, ಪ್ರತಿದಿನವೂ ನಮ್ಮ ಓದು, ಬರವಣಿಗೆ, ಮಾತು ಹಾಗೂ ವ್ಯವಹಾರದಲ್ಲಿ ಕನ್ನಡವನ್ನು ಬಳಸಬೇಕು. ನಮ್ಮ ಭಾಷೆ, ಸಂಸ್ಕೃತಿ ಮತ್ತು ಕಲೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಮೊದಲು ಮನೆಯಿಂದಲೇ ಆರಂಭಿಸಿ, ಮಕ್ಕಳ ಮನಸ್ಸಿನಲ್ಲಿ ಕನ್ನಡ ಪ್ರೀತಿಯನ್ನು ಬಿತ್ತುವ ಕೆಲಸವಾಗಬೇಕು ಎಂದು ಯಲ್ಹೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ಹೇಳಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಹೇರಿಯಲ್ಲಿ…
by

ಯಾದಗಿರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ: ವಿವಿಧೆಡೆ ಕರವೇಯಿಂದ ಧ್ವಜಾರೋಹಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯ ಬಗ್ಗೆ ಪ್ರೀತಿ ಹೊಂದಿರುವುದರ ಜತೆಗೆ ನಾಡಿನ ಭಾಷೆಯಾದ ಕನ್ನಡದ ಬಗ್ಗೆಯೂ ಗೌರವ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಯಾದಗಿರಿ ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಕೋಟೆ ಸೇರಿದಂತೆ ವಾಲ್ಮೀಕಿ ವೃತ್ತ,…
by














